ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಪ್ರಕರಣ: ಓರ್ವ ಆರೋಪಿ ಅರೆಸ್ಟ್ - Mahanayaka
12:29 PM Saturday 31 - January 2026

ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಪ್ರಕರಣ: ಓರ್ವ ಆರೋಪಿ ಅರೆಸ್ಟ್

sudeep
05/05/2023

ಸ್ಯಾಂಡಲ್ ವುಡ್ ಖ್ಯಾತ ನಟ ಕಿಚ್ಚ ಸುದೀಪ್ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಕಿಟ್ಟಿ ಎಂಬ ವ್ಯಕ್ತಿಯೋರ್ವರನ್ನು ಪೊಲೀಸರು ಬಂಧಿಸಿದ್ದು, ಬೆದರಿಕೆ ಪತ್ರದ ಹಿಂದೆ ಡೈರೆಕ್ಟರ್ ವೊಬ್ಬರ ಕೈವಾಡವಿದೆ ಎನ್ನಲಾಗಿದೆ.

ವರದಿಗಳ ಪ್ರಕಾರ ಸುದೀಪ್ ಅವರ ಆತ್ಮೀಯರಾಗಿದ್ದ ರಮೇಶ್ ಕಿಟ್ಟಿ, ಸುದೀಪ್ ಚಾರಿಟೆಬಲ್ ಟ್ರಸ್ಟ್ ನೋಡಿಕೊಳ್ಳುತ್ತಿದ್ದರು. ಸುದೀಪ್ ಅವರ ಮೇಲಿನ ನಂಬಿಕೆಯಿಂದ ಟ್ರಸ್ಟ್ ಗೆ 2 ಕೋಟಿ  ಇನ್ವೆಸ್ಟ್ ಮಾಡಿದ್ದರು ಎನ್ನಲಾಗಿದೆ. ಆದರೆ ಸುದೀಪ್ ಹಣ ವಾಪಸ್ ನೀಡಿಲ್ಲ ಎನ್ನುವ ಕಾರಣಕ್ಕೆ ಬೆದರಿಕೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ.

ಬೆದರಿಕೆ ಪತ್ರದ ಹಿಂದೆ ಯಾರಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಸಿನಿಮಾ ರಂಗದವರೇ ಪ್ರಕರಣದಲ್ಲಿ ಭಾಗಿಯಾಗಿದ್ದು,  ಅವರಿಗೆ ಕಾನೂನಿನ ಮೂಲಕವೇ ಉತ್ತರಿಸುವುದಾಗಿ ಸುದೀಪ್ ಹೇಳಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ