ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ: ದೂರು ದಾಖಲು

sudeep3
05/04/2023

ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಬಂದ ಹಿನ್ನೆಲೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರ ಬರೆದಿರುವ ಅನಾಮಿಕರು 2 ಪತ್ರಗಳ ಮೂಲ ಬೆದರಿಕೆ ಹಾಕಿದ್ದಾರೆ.

ಅವರ ಆಪ್ತ ಜಾಕ್ ಮಂಜು ದೂರು ನೀಡಿದ್ದಾರೆ. ಜಾಕ್ ಮಂಜು ನೀಡಿದ ದೂರಿನನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುತ್ತೇವೆ ಎನ್ನುವುದರ ಜೊತೆಗೆ ಕೆಲ ಅವಾಚ್ಯ ಶಬ್ದಗಳನ್ನು ಸಹ ಪತ್ರದಲ್ಲಿ ದುಷ್ಕರ್ಮಿಗಳು ಬರೆದಿದ್ದಾರೆ ಎನ್ನಲಾಗುತ್ತಿದೆ.

ಅಪರಿಚಿತರು ಪತ್ರದಲ್ಲಿ ಕಿಚ್ಚ ಸುದೀಪ್ ಗೆ ಸೇರಿದ್ದು ಎನ್ನಲಾದ ಖಾಸಗಿ ವಿಡಿಯೋವನ್ನು ಹರಿಯಬಿಡುವುದಾಗಿ ಪತ್ರದಲ್ಲಿ ಧಮ್ಕಿ ಹಾಕಿದ್ದಾರೆ. ಅಲ್ಲದೆ ಪತ್ರದಲ್ಲಿ ನಟ ಸುದೀಪ್ ಗೆ ಕೆಲ ಅವಾಚ್ಯ ಶಬ್ದಗಳಲ್ಲಿ ಬೈದು ಪತ್ರ ಬರೆದಿದ್ದಾರೆ.

ಈ ಪತ್ರ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದು ಬಳಿಕ ಅವರು ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 504 (ಬೆದರಿಕೆ) 506(ಪ್ರಾಣ ಬೆದರಿಕೆ) ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version