IPS ಅಧಿಕಾರಿಗೆ ಬೆದರಿಕೆ: ಹೆಚ್.​ಡಿ.ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು - Mahanayaka

IPS ಅಧಿಕಾರಿಗೆ ಬೆದರಿಕೆ: ಹೆಚ್.​ಡಿ.ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು

h d kumarasawmy
05/11/2024

ಬೆಂಗಳೂರು: ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಹೆಚ್.​ಡಿ.ಕುಮಾರಸ್ವಾಮಿ ಅವರು ತಮಗೆ ಬೆದರಿಕೆ ಹಾಕಿದ್ದಾರೆ ಎಂದು ಎಡಿಜಿಪಿ ಚಂದ್ರಶೇಖರ್​ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಾಗಿದೆ.

ನ್ಯಾಯಾಲಯದ ಆದೇಶದ ಮೇರೆಗೆ ಬಿಎನ್​ಎಸ್​ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್.​ಡಿ.ಕುಮಾರಸ್ವಾಮಿ ಆರೋಪಿ ನಂಬರ್​ 1 ಆಗಿದ್ದಾರೆ. ಜೆಡಿಎಸ್​ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಆರೋಪಿ ನಂಬರ್​ 2 ಆಗಿದ್ದಾರೆ. ಮತ್ತು ಜೆಡಿಎಸ್​ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್​ 3 ಆಗಿದ್ದಾರೆ.

ಆರೋಪಿಗಳಾದ ಹೆಚ್‌.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದಾರೆ. ನನಗೆ ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ  ಅಂತ ದೂರಿನಲ್ಲಿ ತಿಳಿಸಲಾಗಿದೆ. 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್ ​ಐಆರ್ ದಾಖಲಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ