ಅರೆಸ್ಟ್: ಸ್ಯಾನಿಟರಿ ಪ್ಯಾಡ್ ಗಳಲ್ಲಿ ಕೋಟಿ ಕೋಟಿ ಮೌಲ್ಯದ ಕೊಕೇನ್ ಪತ್ತೆ; ಮೂವರು ಆಫ್ರಿಕನ್ ಮಹಿಳೆಯರು ಅಂದರ್

14/10/2023

ಸ್ಯಾನಿಟರಿ ಪ್ಯಾಡ್ ಗಳಲ್ಲಿ ಸುಮಾರು 5.68 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ತುಂಬಿಕೊಂಡು ಬರುತ್ತಿದ್ದ ಮೂವರು ಆಫ್ರಿಕನ್ ಮಹಿಳೆಯರನ್ನು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಸ್ಯಾನಿಟರಿ ಪ್ಯಾಡ್ ಗಳಲ್ಲಿ ನಿಷೇಧಿತ ವಸ್ತುಗಳನ್ನು ಕಳ್ಳ ಸಾಗಾಣೆ ಮಾಡುತ್ತಿರುವುದಾಗಿ ಗುಪ್ತಚರ ವರದಿಯ ಆಧಾರದ ಮೇಲೆ ಕಳೆದ ಮೂರು ದಿನಗಳಿಂದ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ ಕಾರ್ಯಾಚರಣೆ ನಡೆಸುತ್ತಿತ್ತು.
ತನಿಖೆ ವೇಳೆ ಮೂವರು ವಿದೇಶಿ ಮಹಿಳಾ ಪ್ರಯಾಣಿಕರನ್ನು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ ಸಿಬ್ಬಂದಿ ಬಂಧಿಸಿದ್ದಾರೆ. ಇವರಿಂದ ಒಟ್ಟು 568 ಗ್ರಾಂ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಈ ಮೂವರು ವಿದೇಶಿ ಮಹಿಳೆಯರು ಸ್ಯಾನಿಟರಿ ಪ್ಯಾಡ್ ಮತ್ತು ಗುದನಾಳದ ಒಳಗೆ ಕೊಕೇನ್ ಅನ್ನು ಇರಿಸಿ ತರುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version