ಬುರ್ಖಾ ಧರಿಸಿ ಆಭರಣ ಅಂಗಡಿಯಲ್ಲಿ ಕಳ್ಳತನ ಪ್ರಕರಣ: ಮೂವರ ಬಂಧನ

ಬುರ್ಖಾ ಧರಿಸಿ ಹೈದರಾಬಾದ್ನ್ ಆಭರಣ ಅಂಗಡಿಯನ್ನು ಲೂಟಿ ಮಾಡಲು ಪ್ರಯತ್ನಿಸಿದ ಮೂವರು ದರೋಡೆಕೋರರನ್ನು ಸೈಬರಾಬಾದ್ ಪೊಲೀಸರು ಬಂಧಿಸಲಾಗಿದೆ. ಜೂನ್ 20 ರಂದು ಹೈದರಾಬಾದ್ ನ ಮೆಡ್ಚಲ್ ಪಟ್ಟಣದ ಆಭರಣ ಅಂಗಡಿಯನ್ನು ಗುರಿಯಾಗಿಸಿಕೊಂಡು ಇಬ್ಬರು ಕಳ್ಳರು ಮಾಲೀಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದರು. ಅವರಲ್ಲಿ ಓರ್ವ ಬುರ್ಖಾ ಧರಿಸಿದ್ದರೆ, ಇನ್ನೊಬ್ಬರು ಮುಖ ಮರೆಮಾಚಲು ಹೆಲ್ಮೆಟ್ ಧರಿಸಿದ್ದರು. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.
ಪೊಲೀಸರು ಅಪರಾಧಿಗಳಿಗಾಗಿ ಭಾರಿ ಬೇಟೆಯನ್ನು ಪ್ರಾರಂಭಿಸಿದರು. ಅಪರಾಧಿಗಳನ್ನು ಪತ್ತೆಹಚ್ಚಲು ಸುಮಾರು 16 ತಂಡಗಳು 161 ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ 36 ವರ್ಷದ ಆರೋಪಿ ನಜೀಮ್ ಅಜೀಜ್ ಕೊಟಾಡಿಯಾ, 23 ವರ್ಷದ ಶೇಕ್ ಸೊಹೈಲ್ ಹಾಗೂ ಸಲ್ಮಾನ್ ಎಂಬಾತನನ್ನು ಬಂಧಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth