8:59 PM Wednesday 5 - November 2025

ವಿದ್ಯುತ್ ಸ್ಪರ್ಶದಿಂದ ಮೂರು ಹಸುಗಳು ಸಾವು

chikamagaluru
05/11/2025

ಚಿಕ್ಕಮಗಳೂರು: ವಿದ್ಯುತ್ ಸ್ಪರ್ಶದಿಂದ ಮೂರು ಹಸುಗಳು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಕೆಳಮಲ್ಲಂದೂರು ಗ್ರಾಮದಲ್ಲಿ ಭಾನುವಾರ ನಡೆದಿದೆ.

ಕೆಳಮಲ್ಲಂದೂರು ಗ್ರಾಮದ ಕೃಷಿಕ ಸಿ.ಎಸ್. ಗೋಪಾಲಗೌಡ ಎಂಬುವವರಿಗೆ ಸೇರಿದ ಮೂರು ಜರ್ಸಿ ಹಸುಗಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿವೆ.

ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರಿಂದ ಆಕಸ್ಮಿಕ ವಿದ್ಯುತ್ ತಗುಲಿ ಹಸುಗಳು ಅಸುನೀಗಿವೆ ಎಂದು ಹೇಳಲಾಗುತ್ತಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಕುಟುಂಬಕ್ಕೆ ಆರ್ಥಿಕ ಆಧಾರಸ್ತಂಭವಾಗಿದ್ದ ಮೂರು ಹಸುಗಳು ಏಕಕಾಲದಲ್ಲಿ ಸಾವನ್ನಪ್ಪಿದ್ದು, ಸುಮಾರು 2 ಲಕ್ಷಕ್ಕೂ ಅಧಿಕ ನಷ್ಟವುಂಟಾಗಿದೆ. ಪ್ರೀತಿಯಿಂದ ಸಾಕಿ ಸಲಹಿದ್ದ ಹಸುಗಳು ಸಾವನ್ನಪ್ಪಿರುವುದರಿಂದ ರೈತ ಗೋಪಾಲಗೌಡ ಕುಟುಂಬದವರು ಕಂಗಾಲಾಗಿದ್ದಾರೆ.

ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತರಿಗೆ ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version