ನಾಮಕರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ: ಒಂದೇ ಕುಟುಂಬದ ಮೂವರು ಸಾವು - Mahanayaka
4:02 PM Saturday 24 - January 2026

ನಾಮಕರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ: ಒಂದೇ ಕುಟುಂಬದ ಮೂವರು ಸಾವು

nelamangala
10/04/2025

ನೆಲಮಂಗಲ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ  ನೆಲಮಂಗಲ  ತಾಲೂಕಿನ ದಾಬಸ್ ಪೇಟೆ ಬಳಿಯ ಅಂಚೆಮನೆ ಕ್ರಾಸ್ ಬಳಿ ನಡೆದಿದೆ.

ಬೆಂಗಳೂರಿನ ಮಲ್ಲೇಶ್ವರಂ ಮೂಲದ ತಾಯಿ ಶಶಿಕಲಾ(55) ಮಗಳು ದೀಪಿಕಾ(35) ಹಾಗೂ ತಂದೆ ಗೋಪಾಲ್(60) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಬೆಂಗಳೂರು ಮಾರ್ಗವಾಗಿ ತುಮಕೂರಿನಲ್ಲಿ ನಾಮಕರಣ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ವೇಳೆ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ