ವಿದ್ಯುತ್ ತಂತಿ ಸ್ಪರ್ಶಿಸಿ ಮೂವರ ದಾರುಣ ಸಾವು!

23/07/2025
ಚಿತ್ರದುರ್ಗ: ತೋಟದಲ್ಲಿ ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ನಡೆದಿದೆ.
ನಜೀರ್(30), ಫಾರುಕ್(30) ಮತ್ತು ಹೊಳಲ್ಕೆರೆ ತಾಲೂಕಿನ ಗ್ಯಾರೆಹಳ್ಳಿಯ ಶ್ರೀನಿವಾಸ್(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತಪಟ್ಟವರು ದಾವಣಗೆರೆ ಮೂಲದ ಕಾರ್ಮಿಕರಾಗಿದ್ದಾರೆ.
ಶ್ರೀನಿವಾಸ್ ಎಂಬವರ ತೋಟದಲ್ಲಿ ಕಬ್ಬಿಣದ ಕಂಬ ನೆಡುವ ವೇಳೆ ಈ ದುರಂತ ಸಂಬವಿಸಿದೆ. ವಿದ್ಯುತ್ ಆಘಾತದಿಂದ ಗಂಭೀರ ಸ್ಥಿತಿಯಲ್ಲಿದ್ದ ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: