ಆಂಧ್ರಪ್ರದೇಶದಲ್ಲಿ ಶಾಲಾ ಬಸ್ ಗೆ ಕಾರು ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಆಂಧ್ರಪ್ರದೇಶದ ವಾರಂಗಲ್‌ನಲ್ಲಿ ಕಾರು ಮತ್ತು ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಾರಂಗಲ್ ಜಿಲ್ಲೆಯ ಕಮಲಾಪುರದ ಉಪನಗರದಲ್ಲಿರುವ ಪರಕಲಾ ಹುಜುರಾಬಾದ್ ನ ಮುಖ್ಯ ಹೆದ್ದಾರಿಯಲ್ಲಿ 30 ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ. ಏಕಶಿಲಾ ಶಾಲೆಯ ವಿದ್ಯಾರ್ಥಿಗಳು ಯಾವುದೇ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಅವರಲ್ಲಿ ಇಬ್ಬರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನ ಅತಿಯಾದ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಪ್ರಾಥಮಿಕ ವರದಿಗಳು ಸೂಚಿಸುತ್ತವೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth