ರಂಝಾನ್ ಉಪವಾಸ ಮುಗಿಸಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಾವು

ಶಿವಮೊಗ್ಗ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ರಫನ್, ಇಯನ್ ಹಾಗೂ ಸಮ್ಮರ್ ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲರೂ SSLC ವಿದ್ಯಾರ್ಥಿಗಳಾಗಿದ್ದು, ರಂಝಾನ್ ಉಪವಾಸ ಮುಗಿಸಿದ ಬಳಿಕ ತುಂಗಾ ನದಿಗೆ ಈಜಲು ತೆರಳಿದ್ದು, ಈ ವೇಳೆ ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೇಸಿಗೆಯ ಸಂದರ್ಭದಲ್ಲಿ ನದಿಗೆ ಈಜಲು ಹೋಗುವ ಮಕ್ಕಳ ಬಗ್ಗೆ ಪೋಷಕರು ಎಚ್ಚರವಹಿಸಬೇಕಿದೆ. ನೀರಿನ ಆಳ—ಅಗಲ ತಿಳಿಯದೇ ನೀರಿಗೆ ಇಳಿಯುವುದು ಅಪಾಯವನ್ನು ಆಹ್ವಾನಿಸಿದಂತೆ. ಈಗಾಗಲೇ ರಾಜ್ಯದ ಹಲವೆಡೆಗಳಲ್ಲಿ ನೀರಲ್ಲಿ ಮುಳುಗಿ ಮಕ್ಕಳು, ಯುವಕರು ಸಾವನ್ನಪ್ಪುತ್ತಿರುವ ಹಲವು ಘಟನೆಗಳು ನಡೆಯುತ್ತಿವೆ. ನೀರಿನ ಆಳ ಅರಿಯದೇ ಇಳಿದು ಬಾಳಿ ಬದುಕಬೇಕಿರುವ ಯುವ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth