11:25 AM Saturday 23 - August 2025

ಭದ್ರಾ ನದಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರು ಸಾವು

bhadra
20/06/2024

ಚಿಕ್ಕಮಗಳೂರು: ನಿನ್ನೆ ಪ್ರವಾಸಕ್ಕೆ ಭದ್ರಾ ನದಿ ಹಿನ್ನೀರಿಗೆ ಆಗಮಿಸಿದ್ದ ನಾಲ್ವರು ಸ್ನೇಹಿತರ ಪೈಕಿ ಮೂವರು ತೆಪ್ಪ ಮುಳುಗಿ ಸಾವನ್ನಪ್ಪಿ ಘಟನೆ ನಡೆದಿತ್ತು. ಇಂದು ಭದ್ರಾ ಬ್ಯಾಕ್ ವಾಟರ್ ನಲ್ಲಿ ಮೂವರ  ಮೃತದೇಹ ಪತ್ತೆಯಾಗಿದೆ.

ಆದೀಲ್, ಸಾಜೀದ್, ಅಫ್ಧಾಖಾನ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ವಿದ್ಯಾನಗರ ಮೂಲದವರಾಗಿದ್ದಾರೆ.

ಅಗ್ನಿಶಾಮಕ ದಳ, ಸ್ಥಳೀಯ ಮುಳುಗು ತಜ್ಞರು ಇಂದು ಮೃತದೇಹ ಹೊರ ತೆಗೆದಿದ್ದು, ಮೃತದೇಹಗಳನ್ನು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಶವಗಾರಕ್ಕೆ ರವಾನಿಸಲಾಗಿದೆ.

ನಿನ್ನೆಯೂ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರು ಶೋಧ ಕಾರ್ಯಾಚರಣೆ ನಡೆಸಿದ್ದರು. ಆದರೆ ಕತ್ತಲಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಇಂದು ಮುಂಜಾನೆ ಮತ್ತೆ ಶೋಧ ಕಾರ್ಯಾಚರಣೆ ನಡೆಸಿ, ಮೃತದೇಹಗಳನ್ನು ಹೊರ ತೆಗೆಯಲಾಯಿತು.

ಒಟ್ಟು ನಾಲ್ವರು ಸ್ನೇಹಿತರು ಪ್ರವಾಸಕ್ಕೆ ಆಗಮಿಸಿದ್ದರು. ಈ ಪೈಕಿ ಮೂವರು ತೆಪ್ಪದಲ್ಲಿ ಹೋಗಿದ್ದರು. ಒಬ್ಬ ದಡದಲ್ಲಿ ನಿಂತಿದ್ದ. ತೆಪ್ಪ ಮಗುಚಿ ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ಈ ಘಟನೆ ನಡೆದಿದೆ. ಘಟನೆ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version