ತ್ರಿಶೂಲ ದೀಕ್ಷೆ ನೀಡಿದ್ದೇವೆಯೇ ಹೊರತು ಬಾಂಬ್, ಗ್ರೆನೈಡ್ ಕೊಟ್ಟಿದ್ದಲ್ಲ | ಶರಣ್ ಪಂಪ್ ವೆಲ್ - Mahanayaka

ತ್ರಿಶೂಲ ದೀಕ್ಷೆ ನೀಡಿದ್ದೇವೆಯೇ ಹೊರತು ಬಾಂಬ್, ಗ್ರೆನೈಡ್ ಕೊಟ್ಟಿದ್ದಲ್ಲ | ಶರಣ್ ಪಂಪ್ ವೆಲ್

sharan pumpwell
16/10/2021


Provided by

ಮಂಗಳೂರು: ತ್ರಿಶೂಲ ದೀಕ್ಷೆ ನೀಡಿರುವ ವಿಚಾರ ವಿವಾದಕ್ಕೀಡಾಗಿರುವ ಬೆನ್ನಲ್ಲೇ ವಿಶ್ವ ಹಿಂದೂ ಪರಿಷತ್ ನ ಮಂಗಳೂರು ವಿಭಾಗದ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ತ್ರಿಶೂಲ ದೀಕ್ಷೆಯನ್ನು ಸಮರ್ಥಿಸಿಕೊಂಡರು.

ನಾವು ಶಕ್ತಿಯ ಆರಾಧಕರು, ಆತ್ಮರಕ್ಷಣೆ, ಧರ್ಮರಕ್ಷಣೆ ಬಗ್ಗೆ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಮೂಡಿಸಲು ತ್ರಿಶೂಲ ದೀಕ್ಷೆ ನೀಡಲಾಗಿದೆಯೇ ವಿನಃ ಬಾಂಬ್, ಗ್ರೆನೈಡ್ ಕೊಟ್ಟಿದ್ದಲ್ಲ ಎಂದು ಅವರು ಈ ಸಂಬಂಧ ಪ್ರತಿಕ್ರಿಯಿಸಿದ್ದಾರೆ.

ಈ ಕಾರ್ಯಕ್ರಮವನ್ನು  ಹೊಸದಾಗಿಯೇನು ಆಚರಿಸುತ್ತಿಲ್ಲ.  ಕೊವಿಡ್ ನಿಂದಾಗಿ ಕಳೆದೆರಡು ವರ್ಷ ಆಚರಿಸಲಾಗಿಲ್ಲ. ಆಯುಧ ಪೂಜೆಯ ದಿನದಂದು ತ್ರಿಶೂಲ ದೀಕ್ಷೆ ಕಾರ್ಯಕ್ರಮ ಮಾಡಿದ್ದೇವೆ. ಇದು ಯಾರ ವಿರುದ್ಧವೂ ಅಲ್ಲ. ಕಾನೂನು ಬದ್ಧವಾಗಿಯೇ ಕಾರ್ಯಕ್ರಮ ಮಾಡಿದ್ದೇವೆ ಎಂದು ಅವರು ಹೇಳಿದರು.

ಇದು ಸ್ಟೀಲ್ ಒಂದು ವಸ್ತು. ಅದಕ್ಕೆ ತ್ರಿಶೂಲದ ಆಕಾರ ನೀಡಲಾಗಿದೆ. ಇದು ಹರಿತವಾಗಿಯೂ ಇಲ್ಲ. ಇದರಿಂದ ಏನೂ ಆಗಲ್ಲ. ಯಾರನ್ನೋ ಕೊಲ್ಲಬೇಕು, ಚುಚ್ಚಬೇಕು ಅಥವಾ ಮತ್ತೊಬ್ಬರಿಗೆ ಏನನ್ನಾದರೂ ಮಾಡಬೇಕು ಎನ್ನುವ ಉದ್ದೇಶ ಇದರಲ್ಲಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು

ಉಡುಪಿ: ‘ದುರ್ಗಾ ದೌಡ್’ ಮೆರವಣಿಗೆಯಲ್ಲಿ ಹಿಂದೂ ಜಾಗರಣ ಕಾರ್ಯಕರ್ತರಿಂದ ತಲವಾರು ಪ್ರದರ್ಶನ

ದುರ್ಗಾ ದೇವಿಯ ವಿಗ್ರಹ ವಿಸರ್ಜನೆ ವೇಳೆ ನದಿಯಲ್ಲಿ ಮುಳುಗಿ ನಾಲ್ವರು ಯುವಕರ ದಾರುಣ ಸಾವು!

ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರಿಗೆ 89 ಸಾವಿರ ರೂ. ಪಂಗನಾಮ ಹಾಕಿದ ಸೈಬರ್ ಕಳ್ಳರು!

ದಸರಾ ಮೆರವಣಿಗೆಯ ಮೇಲೆ ಹರಿದ ಕಾರು: 20ಕ್ಕೂ ಅಧಿಕ ಮಂದಿ ನಜ್ಜುಗುಜ್ಜು

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ಹೆಡ್ ಕಾನ್ಸ್ ಟೇಬಲ್ ಸಾವು

ದಕ್ಷಿಣ ಕನ್ನಡ, ಉಡುಪಿ ಸಹಿತ 16 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ!

ಟಿಪ್ಪು ಸುಲ್ತಾನ್ ಇಲ್ಲದ ಮೈಸೂರು ದಸರಾ: ಬಿಜೆಪಿ ಸರಕಾರದ ಕೋಮುವಾದಿ ನಡೆ ಇತಿಹಾಸಕ್ಕೆ ಬಗೆದ ದ್ರೋಹ | ಪಾಪ್ಯುಲರ್ ಫ್ರಂಟ್

ಇತ್ತೀಚಿನ ಸುದ್ದಿ