ಎರಡು ಜೀವಗಳನ್ನು ಬಲಿಪಡೆದಿದ್ದ ಪುಂಡಾನೆ ಸೆರೆ! - Mahanayaka

ಎರಡು ಜೀವಗಳನ್ನು ಬಲಿಪಡೆದಿದ್ದ ಪುಂಡಾನೆ ಸೆರೆ!

wild elephant
16/02/2025


Provided by

Wild Elephant– ಮಡಿಕೇರಿ:  ಎರಡು ಜೀವಗಳನ್ನು ಬಲಿ ಪಡೆದಿದ್ದ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಗಜಪಡೆಗಳು ಯಶಸ್ವಿಯಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಪುಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.


Provided by

ಕಳೆದ ಕೆಲವು ವರ್ಷಗಳ ಹಿಂದೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಚೆನ್ನಂಗೊಲ್ಲಿ, ಭದ್ರಗೊಳ, ದೇವರಪುರ ವ್ಯಾಪ್ತಿಯಲ್ಲಿ  ಸುಮಾರು 40 ವರ್ಷದ ಒಂಟಿ ಸಲಗ ಜನರ ಮೇಲೆ ದಾಳಿ ಮಾಡುತ್ತಾ ಜನರಿಗೆ ತೊಂದರೆಯನ್ನುಂಟು ಮಾಡುತ್ತಿತ್ತು.

ಕೆಲವೇ ತಿಂಗಳುಗಳ ಹಿಂದೆ ಭದ್ರಗೊಳ ಗ್ರಾಮದಲ್ಲಿ ಗೌರಿ ಎಂಬ ಮಹಿಳೆಯ ಮೇಲೆ ದಾಳಿ ಮಾಡಿ ಬಲಿಪಡೆದಿತ್ತು. ಎರಡು ದಿನಗಳ ಹಿಂದೆ ಚೆನ್ನಂಗೊಲ್ಲಿ ಗ್ರಾಮದ ಪಾರ್ವತಿ ಎಂಬವರನ್ನೂ ಬಲಿ ಪಡೆದಿತ್ತು.


Provided by

ಈ ಘಟನೆಯಿಂದ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದರು. ಕಾಡಾನೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ವನ್ಯ ಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಶಾಸಕ ಎ.ಎಸ್.ಪೊನ್ನಣ್ಣ ಮೂಲಕ ಸಚಿವರಿಗೆ ಒತ್ತಡ ಹೇರಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಾಡಾನೆ ಸೆರೆಗೆ ಅನುಮತಿ ನೀಡಿದ್ದರು.

ದುಬಾರೆ, ಮತ್ತಿಗೋಡು ಮತ್ತು ಹಾರಂಗಿ ಸಾಕಾನೆ ಶಿಬಿರದ 7 ಸಾಕಾನೆಗಳು,  90ಕ್ಕೂ ಅಧಿಕ ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಅರವಳಿಕೆ ತಜ್ಞ ಡಾ.ರಮೇಶ್ ಅರವಳಿಕೆ ಇಂಜೆಕ್ಷನ್ ಶೂಟ್ ಮಾಡಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ