ಸರ್ಕಾರಿ ಬಸ್ ಗಳ ಟಿಕೆಟ್ ದರ ಏರಿಕೆ ಇಂದಿನಿಂದಲೇ ಜಾರಿ! - Mahanayaka

ಸರ್ಕಾರಿ ಬಸ್ ಗಳ ಟಿಕೆಟ್ ದರ ಏರಿಕೆ ಇಂದಿನಿಂದಲೇ ಜಾರಿ!

ksrtc price hike
05/01/2025

ಬೆಂಗಳೂರು: ಸರ್ಕಾರಿ ಬಸ್ ಗಳ ಟಿಕೆಟ್ ದರ ಏರಿಕೆ ಭಾನುವಾರ ಮಧ್ಯ ರಾತ್ರಿಯಿಂದಲೇ ಜಾರಿಯಾಗಿದೆ.  ಶೇ.15ರಷ್ಟು ಟಿಕೆಟ್ ದರ ಹೆಚ್ಚಳವಾಗಿದೆ.

ಸಾರಿಗೆ ಇಲಾಖೆ ಕೆಎಸ್​ಆರ್​ಟಿಸಿ (KSRTC), ಬಿಎಂಟಿಸಿ (BMTC), ಎನ್​ಡಬ್ಲೂಕೆಆರ್​ಟಿಸಿ (NWKRTC), ಕೆಕೆಆರ್​ಟಿಸಿ (KKRTC) ಬಸ್​ಗಳ ಟಿಕೆಟ್ ದರ ಪರಿಷ್ಕರಣೆ ಮಾಡಲಾಗಿದೆ.

50ರಿಂದ 100 ರೂಪಾಯಿಗಳಷ್ಟು ಟಿಕೆಟ್ ದರ ಏರಿಕೆಯಾಗಿದೆ. ಕೆಎಸ್ಆರ್ ಟಿಸಿ ಪಾಸ್ 150 ರಿಂದ 200 ರೂಪಾಯಿವರೆಗೆ ಹೆಚ್ವಳವಾಗಿದ್ದರೆ, ಬಿಎಂಟಿಸಿ ಪಾಸ್ ದರ 100 ರಿಂದ 150 ರೂಪಾಯಿವರೆಗೆ ಏರಿಕೆ ಆಗಿದೆ.

ಬಸ್ ದರ ಏರಿಕೆ ವಿರುದ್ಧ ವಿಪಕ್ಷ ಬಿಜೆಪಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದರೂ, ವಿರೋಧಗಳ ನಡುವೆಯೇ ಬಸ್ ಪ್ರಯಾಣ ದರ ಏರಿಕೆ ಮಾಡಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

 

ಇತ್ತೀಚಿನ ಸುದ್ದಿ