ಸುರಿಯುವ ಮಳೆ ನೀರನ್ನು ಕುಡಿದು ದಣಿವಾರಿಸಿಕೊಂಡ ವ್ಯಾಘ್ರ!!

ಚಾಮರಾಜನಗರ: ಚಾಮರಾಜನಗರ ಜಿಲ್ಲಾದ್ಯಂತ ಕಳೆದ 3 ದಿನಗಳಿಂದ ತುಂತುರು ಮಳೆಯಾಗುತ್ತಿದ್ದು ಬಂಡೀಪುರ ಅರಣ್ಯ ಪ್ರದೇಶದಲ್ಲೂ ಬಿರುಸಿನ ಮಳೆಯಾಗುತ್ತಿದೆ.
ಧೋ ಎಂದು ಸುರಿಯುವ ಮಳೆ ನೀರನ್ನು ಕುಡಿದು ಹುಲಿಯೊಂದು ದಣಿವಾರಿಸಿಕೊಂಡ ದೃಶ್ಯ ಬಂಡೀಪುರ ಸಫಾರಿಗೆ ತೆರಳಿದ್ದ ವೇಳೆ ಸೆರೆಯಾಗಿದ್ದು ಸದ್ಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದೆ.
ಸುರಿಯುತ್ತಿದ್ದ ಮಳೆಯಿಂದ ರಸ್ತೆ ಮಧ್ಯದ ಹಳ್ಳದಲ್ಲಿ ನಿಂತಿದ್ದ ನೀರನ್ನು ಹುಲಿಯೊಂದು ಕುಸಿಯುತ್ತಿರುವುದನ್ನು ಸಫಾರಿಗೆ ತೆರಳಿದವರು ಸೆರೆ ಹಿಡಿದಿದ್ದು ವ್ಯಾಘ್ರನನ್ನು ಕಂಡ ಸಫಾರಿಗರು ರೋಮಾಂಚಿತರಾಗಿದ್ದಾರೆ.
ಇನ್ನು, ವೀಡಿಯೋ ಬಂಡೀಪುರ ಸಫಾರಿಯಲ್ಲಿ ತೆಗೆದಿದ್ದಾಗಿದೆ ಎಂದು ಸಿಎಫ್ಒ ರಮೇಶ್ ಕುಮಾರ್ ದೃಢಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw