ಮೇಯಲು ಬಿಟ್ಟಿದ್ದ ಹಸುವನ್ನು ಬೇಟೆಯಾಡಿದ ಹುಲಿ - Mahanayaka

ಮೇಯಲು ಬಿಟ್ಟಿದ್ದ ಹಸುವನ್ನು ಬೇಟೆಯಾಡಿದ ಹುಲಿ

chikkamagaluru
06/01/2025

ಕೊಟ್ಟಿಗೆಹಾರ: ಮೇಯಲು ಬಿಟ್ಟಿದ್ದ ಹಸುವನ್ನು ಹುಲಿಯೊಂದು ಕೊಂದು ಹಾಕಿರುವ ಘಟನೆ ಮೂಡಿಗೆರೆತಾಲೂಕಿನ ನಿಡುವಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರ್ಕಲ್ ಗ್ರಾಮದಲ್ಲಿ ನಡೆದಿದೆ.

ಮರ್ಕಲ್ ಗ್ರಾಮದ ನರೇಂದ್ರ ಗೌಡ ಹಸುವನ್ನು ತಮ್ಮ ತೋಟದಲ್ಲಿ ಮೇಯಲು ಬಿಟ್ಟಿದ್ದಾಗ ಹುಲಿ ದಾಳಿ ನಡೆಸಿದ್ದು ಹಸುವನ್ನು ಸಾಯಿಸಿ ಅರ್ಧ ದೇಹವನ್ನು ತಿಂದು ಹಾಕಿದೆ.


ADS

ಹಸು ಇತ್ತೀಚಿಗಷ್ಟೇ ಕರುವಿಗೆ ಜನ್ಮ ನೀಡಿತ್ತು ಕರುವಿನ ಆಕ್ರಂದನ ನೋಡುಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಉದಯ್ ಅರಣ್ಯ ಅಧಿಕಾರಿ ಗಿರೀಶ್ ಮೊದಲಾದವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ