ಪ್ರಧಾನಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ: ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರ ಶರದ್ ಪವಾರ್, ಅಜಿತ್ ಪವಾರ್ ..?

ಲೋಕಮಾನ್ಯ ತಿಲಕರ 103ನೇ ಪುಣ್ಯತಿಥಿಯಾದ ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ (ಹಿಂದ್ ಸ್ವರಾಜ್ ಸಂಘ) ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ ಎಂದು ಟ್ರಸ್ಟ್ ಅಧ್ಯಕ್ಷ ದೀಪಕ್ ತಿಲಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರ ಸರ್ವೋಚ್ಚ ನಾಯಕತ್ವವನ್ನು ಗುರುತಿಸಿ ಮತ್ತು ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸುವುದಕ್ಕಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರಶಸ್ತಿ ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ವಿಶೇಷ ಏನಂದ್ರೆ ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಶರದ್ ಪವಾರ್ ಅವರನ್ನು ಆಹ್ವಾನಿಸಲಾಗಿದೆ. ಇದೇ ವೇಳೆ ಇವರ ಸೋದರಳಿಯ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ರನ್ನು ಕೂಡಾ ಕಾರ್ಯಕ್ರಮಕ್ಕೆ ಕರೆಯಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಆತ್ಮನಿರ್ಭರ್ ಭಾರತ್ ಪರಿಕಲ್ಪನೆಯಡಿಯಲ್ಲಿ ಪ್ರಧಾನ ಮಂತ್ರಿಯವರ ಸರ್ವೋಚ್ಚ ನಾಯಕತ್ವದಲ್ಲಿ ಭಾರತವು ಪ್ರಗತಿಯನ್ನು ಸಾಧಿಸಿದೆ ಎಂದು ಸಂಘಟಕರು ಹೇಳಿದ್ದಾರೆ. ಪ್ರಧಾನಿ ಮೋದಿಯವರು ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸಿದ್ದು,ಅವರು ಭಾರತವನ್ನು ಜಾಗತಿಕ ಭೂಪಟದಲ್ಲಿ ಇರಿಸಿದರು. ಅವರ ಪರಿಶ್ರಮ ಮತ್ತು ಪ್ರಯತ್ನಗಳನ್ನು ಪರಿಗಣಿಸಿ ತಿಲಕ್ ಸ್ಮಾರಕ ಮಂದಿರ ಟ್ರಸ್ಟ್‌ನ ಟ್ರಸ್ಟಿಗಳು ಅವರನ್ನು ಈ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಇತರ ಆಹ್ವಾನಿತರಲ್ಲಿ ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಸೇರಿದ್ದಾರೆ.
ಜುಲೈ 2 ರಂದು ಅಜಿತ್ ಪವಾರ್ ಮತ್ತು ಎನ್‌ಸಿಪಿಯ ಎಂಟು ಶಾಸಕರು ಶಿವಸೇನೆ-ಬಿಜೆಪಿ ಸರ್ಕಾರ ಸೇರಿದ್ದರು. ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಶರದ್ ಪವಾರ್ ಅವರು ಎನ್‌ಸಿಪಿ ನಾಯಕರ ಭ್ರಷ್ಟಾಚಾರದ ಬಗ್ಗೆ ಇತ್ತೀಚಿನ ಹೇಳಿಕೆಗಳನ್ನು ಪ್ರಧಾನಿ ಮೋದಿಯವರಿಗೆ ನೆನಪಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw