1:48 AM Wednesday 10 - September 2025

ಕೆಂಪಣ್ಣ ಆಯೋಗ ವರದಿ : ಸಿದ್ದರಾಮಯ್ಯ ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ: ಸಿಎಂ ಬಸವರಾಜ ಬೊಮ್ಮಾಯಿ

cm bommai
25/02/2023

ಬೆಂಗಳೂರು:  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಟು ಸತ್ಯವನ್ನು  ಎದುರಿಸುವ ಕಾಲ ಬಂದಿದೆ   ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ  ಡಿನೋಟಿಫಿಕೇಷನ್ ಗೆ ಸಂಬಂಧಿಸಿದಂತೆ ಸಿಎಂ ಸುಳ್ಳು  ಹೇಳಿದ್ದಾರೆ ಎಂಬ ಆರೋಪಕ್ಕೆ ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಸಿದ್ದರಾಮಯ್ಯ ಅವರೇ ನೇಮಿಸಿದ್ದ  ನ್ಯಾಯಮೂರ್ತಿ  ಕೆಂಪಣ್ಣ ಅವರ ಆಯೋಗವು  ಸುದೀರ್ಘವಾಗಿ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ  ತನಿಖೆ ನಡೆಸಿದ ವರದಿಯನ್ನು  ನಾನು ಓದಿದ್ದೇನೆ. ನಾನು ಸುಳ್ಳು ಹೇಳುವ ಪ್ರಶ್ನೆಯೇ ಇಲ್ಲ.  ಸಿದ್ದರಾಮಯ್ಯನವರು  ಸುಳ್ಳು  ಹೇಳುತ್ತಿದ್ದಾರೆ.   ಅಧಿಕಾರಿಗಳು ಕಡತ ತಂದರು  ಅನುಮೋದಿಸಿದೆ ಎಂದು ಬರೆದಿರುವುದಾಗಿ  ಅವರೇ ಹೇಳಿರುವುದರ  ಅರ್ಥ, ತಪ್ಪು ಮಾಡಿರುವುದನ್ನು ಒಪ್ಪಿಕೊಂಡಂತೆ. ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾಗಿಲ್ಲ ಎಂದರು.

ಅಡ್ವೊಕೇಟ್ ಜನರಲ್ ಬಗ್ಗೆ ಹೇಳಿದ್ದು, ಅವರ ವಾದದ ನಂತರ ನ್ಯಾಯಮೂರ್ತಿಗಳು ಏನು ಹೇಳಿದ್ದಾರೆ ಎನ್ನುವುದು ಮುಖ್ಯ.  ರಾಜಕೀಯ ವ್ಯಕ್ತಿಗಳು, ಅಧಿಕಾರಿಗಳ ಭ್ರಷ್ಟಾಚಾರವನ್ನು ರಕ್ಷಿಸಲು ಎಂದು  ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಅದನ್ನೇ ನಾನು  ಹೇಳಿದ್ದು. ತೀರ್ಪು ಹಾಗೂ ಆಯೋಗದ ವರದಿಯನ್ನು ನಾನು ಓದಿದ್ದು. ಈಗಾಗಲೇ ಏನು ಕ್ರಮ ತೆಗೆದುಕೊಂಡಿದ್ದಾರೆ ಎಂದು ನಾವು ನೋಡಿದ್ದೇವೆ. ಇನ್ನು ಮುಂದೆ ನಾವೇನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version