12:32 AM Wednesday 20 - August 2025

ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾದ ಟಿಪ್ಪು ಖಡ್ಗ

14/11/2024

ಮೈಸೂರು ಹುಲಿ ಟಿಪ್ಪುಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ.
ಈ ಖಡ್ಗವನ್ನು ಟಿಪ್ಪು 1799 ರಲ್ಲಿ ಬ್ರಿಟಿಷರ ವಿರುದ್ಧ ಯುದ್ಧದಲ್ಲಿ ಸೋತ ನಂತರ ಆಗಿನ ಬ್ರಿಟಿಷ್ ಸೇನೆಯ ಕ್ಯಾಪ್ಟನ್ ಜೇಮ್ಸ್ ಆಂಡ್ರ್ಯೂ ಡಿಕ್ ಎಂಬಾತನಿಗೆ ಉಡುಗೊರೆಯಾಗಿ ನೀಡಿದ್ದರು.

ಈ ಖಡ್ಗ ಟಿಪ್ಪು ಸುಲ್ತಾನನ ವೈಯಕ್ತಿಕ ಶಸ್ತ್ರಾಗಾರದ ಭಾಗವಾಗಿತ್ತು. . ಈ ಖಡ್ಗದ ಮೂಲವನ್ನು ಸೆರಿಂಗಪಟ್ಟಂ ಕದನದಲ್ಲಿ ಗುರುತಿಸಬಹುದು, ‘ಸ್ಟೀಲ್ ತಲ್ವಾರ್’ ಮೈಸೂರಿನ ವಿಶಿಷ್ಟ ಲಕ್ಷಣವಾದ ‘ಬುಬ್ರಿ ಯಾನೆ ಟೈಗರ್ ಸ್ಟ್ರೈಪ್’ ಅಲಂಕಾರವನ್ನು ಖಡ್ಗ ಹೊಂದಿದೆ.

ಕತ್ತಿಯನ್ನು ಉಡುಗೊರೆಯಾಗಿ ಪಡೆದಿದ್ದ ಡಿಕ್ 75 ನೇ ಹೈಲ್ಯಾಂಡ್ ರೆಜಿಮೆಂಟ್ ಆಫ್ ಫೂಟ್‌ನಲ್ಲಿ ಸೆರಿಂಗಪಟ್ಟಣದಲ್ಲಿ ಲೆಫ್ಟಿನೆಂಟ್ ಆಗಿ ಕರ್ತವ್ಯ ಸಲ್ಲಿಸಿದ್ದರು. ಯುದ್ಧದ ಬಳಿಕ ಟಿಪ್ಪುವಿನ ದೇಹವನ್ನು ಹುಡುಕುವಲ್ಲಿ ಅವನ ರೆಜಿಮೆಂಟ್ ಸಹಾಯ ಮಾಡಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version