ಇಂದು ಮೂಡಿಗೆರೆಯಲ್ಲಿ ತಿರಂಗ ಯಾತ್ರೆ

vinay halekote
23/05/2025

ಮೂಡಿಗೆರೆ: ಆಪರೇಷನ್ ಸಿಂಧೂರ್ ಕಾರ್ಯಚರಣೆಯಲ್ಲಿ ಹೋರಾಡಿದ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ಮೇ 23 ಶುಕ್ರವಾರ ಸಂಜೆ ಪಟ್ಟಣದಲ್ಲಿ ಎಲ್ಲಾ ಪಕ್ಷ ಹಾಗೂ ಸಂಘಟನೆಗಳಿಂದ ತಿರಂಗ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ವಕ್ತಾರ ವಿನಯ್ ಹಳೆಕೋಟೆ ತಿಳಿಸಿದ್ದಾರೆ.

ಬುಧವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು, ಭಯೋತ್ಪಾಧನೆಯಿಂದ ದೇಶದಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ. ದೇಶದ ಏಕತೆಗೆ ವಿರೋಧವಾಗಿರುವ ಈ ಭಯೋತ್ಪಾಧನೆಯನ್ನು ಬೇರು ಸಮೇತ ಕಿತ್ತೊಗೆಯಬೇಕಿದೆ. ಭಾರತೀಯರೆಲ್ಲರೂ ನಮ್ಮ ದೇಶದ ಹೆಮ್ಮೆಯ ವೀರ ಸೈನಿಕರ ಜೊತೆಯಲ್ಲಿರುತ್ತೇವೆಂಬ ಸಂದೇಶ ಸಾರುವ ದೃಷ್ಟಿಯಿಂದ ಈ ತಿರಂಗ ಯಾತ್ರೆ ಹಮ್ಮಿಕೊಳ್ಳಲಾಗಿದೆ  ಎಂದು ತಿಳಿಸಿದರು.

ಎಲ್ಲಾ ಪಕ್ಷ ಹಾಗೂ ಸಂಘಟನೆ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು  ಹೆಚ್ಚಿನ ಸಂಖ್ಯೆಯಲ್ಲಿ ತಿರಂಗ ಯಾತ್ರೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version