ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಸಾವಿಗೆ ಶರಣು

ಬೆಂಗಳೂರು: ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಟೆಕ್ಕಿಯೊಬ್ಬಳು ಸಾವಿಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ನಡೆದಿದೆ.
ವಿದ್ಯಾಶ್ರೀ ಸಾವಿಗೆ ಶರಣಾದ ಯುವತಿಯಾಗಿದ್ದಾಳೆ. ಈಕೆ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಡೆತ್ ನೋಟ್ ನಲ್ಲಿ ಪ್ರಿಯಕರನ ಹೆಸರು ಹಾಗೂ ತನ್ನ ಸಾವಿಗೆ ಕಾರಣ ಏನು ಎಂದು ಬರೆದಿಟ್ಟು ತನ್ನ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.
ಬಸವೇಶ್ವರದಲ್ಲಿ ಜೀಮ್ ಟ್ರೈನರ್ ಆಗಿದ್ದ ಅಕ್ಷಯ್ ಹಾಗೂ ಮಾಡೆಲ್, ಮಿಸ್ ಆಂಧ್ರ ಸ್ಪರ್ಧೆ ವಿಜೇತಳಾಗಿದ್ದ ವಿದ್ಯಾಶ್ರೀ ಕಳೆದ ಒಂದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಅಕ್ಷಯ್ ವಿದ್ಯಾಶ್ರೀ ಬಳಿ 1.76 ಲಕ್ಷ ಹಣ ಪಡೆದುಕೊಂಡಿದ್ದ ಎಂದು ಡೆತ್ ನೋಟ್ ನಲ್ಲಿ ವಿದ್ಯಾಶ್ರೀ ತಿಳಿಸಿದ್ದಾಳೆ.ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ವಿದ್ಯಾ ಮತ್ತು ಆಕೆಯ ಕುಟುಂಬದವರನ್ನು ಅವಾಚ್ಯ ಶಬ್ದಗಳಿಂದ ಅಕ್ಷಯ್ ಬೈಯುತ್ತಿದ್ದ ಎನ್ನಲಾಗಿದೆ. ಇದರಿಂದ ತನ್ನ ಪ್ರಿಯಕರ ತನ್ನಿಂದ ದೂರವಾಗುತ್ತಿದ್ದಾನೆ ಎಂದು ಮಾನಸಿಕ ಖಿನ್ನತೆಗೆ ಒಳಗಾದ ವಿದ್ಯಾಶ್ರೀ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾಳೆ. ಬುಧವಾರ ಯುವತಿಯ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ.
ಘಟನೆ ಸಂಬಂಧ ವಿದ್ಯಾಶ್ರೀ ಪೋಷಕರು ಸೋಲದೇವನಹಳ್ಳಿ ಠಾಣೆಗೆ ದೂರು ನೀಡಿದ್ದು, ದೂರಿನನ್ವಯ ಆರೋಪಿ ಅಕ್ಷಯ್ ನನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw