ತಿರುಪತಿ ಲಡ್ಡು ಪ್ರಸಾದ ವಿವಾದ: ಮಾಜಿ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ಹೇಳಿದ್ದೇನು? - Mahanayaka
9:10 PM Wednesday 11 - December 2024

ತಿರುಪತಿ ಲಡ್ಡು ಪ್ರಸಾದ ವಿವಾದ: ಮಾಜಿ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ಹೇಳಿದ್ದೇನು?

20/09/2024

ಅಮರಾವತಿ: ತಿರುಪತಿ ಲಡ್ಡು ಪ್ರಸಾದ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಲಡ್ಡು ಪ್ರಸಾದ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎನ್ನುವ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರ ಆರೋಪವನ್ನ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತಿರಸ್ಕರಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ತಿರುಪತಿ ದೇವಸ್ಥಾನದಲ್ಲಿ ಲಡ್ಡು ತಯಾರಿಕೆಗೆ ತುಪ್ಪದ ಮಾದರಿ ಸಂಗ್ರಹಿಸಿ ಪ್ರಮಾಣಿಕರಿಸಿದ ಬಳಿಕವೇ ತುಪ್ಪದ ಬಳಕೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರಸಾದದ ಅರ್ಹತೆಯ ಮಾನದಂಡ ದಶಕಗಳಿಂದ ಬದಲಾಗಿಲ್ಲ. ಪೂರೈಕೆದಾರರು ಎನ್‍ ಎಬಿಎಲ್ ಪ್ರಮಾಣಪತ್ರ ಮತ್ತು ಉತ್ಪನ್ನ ಗುಣಮಟ್ಟದ ಪ್ರಮಾಣಪತ್ರವನ್ನು ನೀಡಬೇಕು. ಅದಾದ ಬಳಿಕ ಟಿಟಿಡಿ (TTD) ತುಪ್ಪದಿಂದ ಮಾದರಿಗಳನ್ನು ಸಂಗ್ರಹಿಸುತ್ತದೆ. ಬಳಿಕ ಪರಿಶೀಲಿಸಿದ ಉತ್ಪನ್ನಗಳನ್ನು ಮಾತ್ರ ಬಳಸಲಾಗುತ್ತದೆ ಎಂದು ಹೇಳಿದ್ದಾರೆ.

ದೇವಾಲಯಕ್ಕೆ ಲಡ್ಡು ತಯಾರಿಕೆಗಾಗಿ ಸಾಮಗ್ರಿಗಳನ್ನು ಒದಗಿಸಲು ಪ್ರತಿ ಆರು ತಿಂಗಳಿಗೊಮ್ಮೆ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ. ಈ ವೇಳೆ ಅಗತ್ಯ ದಾಖಲೆಗಳನ್ನು ಹಾಗೂ ಗುಣಮಟ್ಟದ ಪ್ರಮಾಣ ಪತ್ರವನ್ನು ಒದಗಿಸಿ ಟೆಂಡರ್ ಪಡೆಯಬೇಕು. ನಮ್ಮ ಆಡಳಿತದಲ್ಲಿ ನಾವು 18 ಬಾರಿ ಉತ್ಪನ್ನಗಳನ್ನು ತಿರಸ್ಕರಿಸಿದ್ದೇವೆ ಎಂದು ಅವರು ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ