ಇಂದೇ ನಕ್ಸಲ್ ಕೋಟೆಹೊಂಡ ರವೀಂದ್ರ  ಮುಖ್ಯವಾಹಿನಿಗೆ: ನಕ್ಸಲ್ ಚಳುವಳಿಯ ಕೊನೆಯ ವ್ಯಕ್ತಿ - Mahanayaka

ಇಂದೇ ನಕ್ಸಲ್ ಕೋಟೆಹೊಂಡ ರವೀಂದ್ರ  ಮುಖ್ಯವಾಹಿನಿಗೆ: ನಕ್ಸಲ್ ಚಳುವಳಿಯ ಕೊನೆಯ ವ್ಯಕ್ತಿ

naxal raveendra
01/02/2025


Provided by

ಚಿಕ್ಕಮಗಳೂರು: ನಕ್ಸಲ್‌ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ(Kotehonda Ravindra) ಇಂದೇ ಮುಖ್ಯವಾನಿಗೆ ಬರಲಿದ್ದಾರೆ.

ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್(Naxal) ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು.

ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ ಪ್ರಯತ್ನವನ್ನು ಶಾಂತಿಗಾಗಿ ನಾಗರಿಕ ವೇದಿಕೆ ಮತ್ತು ನಕ್ಸಲ್ ಶರಣಾಗತಿ ಸಮಿತಿ ಮಾಡಿದೆ.

ರವೀಂದ್ರ ಭೇಟಿಯಾಗಿ ಮಾತುಕತೆ ನಡೆಸಿದ್ದು, ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ಎಸ್ಪಿ ಕಚೇರಿಯಲ್ಲಿ ಶರಣಾಗಲಿದ್ದಾರೆ ಎಂದು ನಕ್ಸಲ್ ಶರಣಾಗತಿ ಸಮಿತಿ ಸದಸ್ಯ ಕೆ.ಪಿ.ಶ್ರೀಪಾಲ್ ಮತ್ತು ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯ ಕೆ.ಎಲ್.ಅಶೋಕ್  ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ