7:27 PM Saturday 18 - October 2025

ತಿಂಡಿ ತಿನ್ನುವ ವೇಳೆ ಅವಘಡ: ಗಂಟಲಲ್ಲಿ ಚಕ್ಕುಲಿ ಸಿಲುಕಿ ಮಗು ಸಾವು; ಮುಗಿಲುಮುಟ್ಟಿದ ಹೆತ್ತವರ ಆಕ್ರಂದನ

02/12/2023

ತಿನ್ನುವಾಗ ಚಕ್ಕುಲಿ ಎಂಬ ತಿಂಡಿ ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ.

ಮೃತ ಮಗುವನ್ನು ವೈಷ್ಣವ್ ಎಂದು ಗುರುತಿಸಲಾಗಿದೆ. ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್‍ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ವೈಷ್ಣವ್ ಕೂಡಾ ಒಬ್ಬರಾಗಿದ್ದರು. ಘಟನೆ ಸಂದರ್ಭದಲ್ಲಿ ಮಗು ಹಾಗೂ ಆತನ ತಾಯಿ ದಿವ್ಯಾ ಮಾತ್ರ ಮನೆಯಲ್ಲಿದ್ದರು. ಮಗುವಿನ ತಂದೆ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಪಾಲಕ್ಕಾಡ್‍ನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕೆಲಸಕ್ಕೆ ತೆರಳಿದ್ದರು.

ಮಗು ಚಕ್ಕುಲಿಯನ್ನು ತಿಂದುಕೊಂಡು ತನ್ನ ಪಾಡಿಗೆ ಆಟವಾಡುತ್ತಿತ್ತು. ಇದೇ ವೇಳೆ ಏಕಾಏಕಿ ಚಕ್ಕುಲಿಯನ್ನು ನುಂಗಿಬಿಟ್ಟಿದೆ. ಪರಿಣಾಮ ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಮಗುವಿಗೆ ಉಸಿರಾಟದ ತೊಂದರೆ ಪ್ರಾರಂಭವಾಗಿದೆ. ಕೂಡಲೇ ಆತನನ್ನು ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಷ್ಟರಲ್ಲಿ ಮಗು ಮೃತಪಟ್ಟಿತ್ತು.

ಇತ್ತೀಚಿನ ಸುದ್ದಿ

Exit mobile version