11:16 PM Tuesday 14 - October 2025

ಟೋಲ್ ಗೇಟ್ ಸಿಬ್ಬಂದಿಯಿಂದ ವಾಹನ ಸವಾರರ ಮೇಲೆ ಹಲ್ಲೆ

chithradurga
30/09/2021

ಚಿತ್ರದುರ್ಗ: ಟೋಲ್ ಗೇಟ್ ಸಿಬ್ಬಂದಿ ವಾಹನ ಸವಾರರ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಟೋಲ್ ಗೇಟ್ ನಲ್ಲಿ ನಡೆದಿದ್ದು,  ಟೋಲ್ ಗೇಟ್ ಸಿಬ್ಬಂದಿಯ ಗೂಂಡಾಗಿರಿಯಿಂದಾಗಿ ವಾಹನ ಸವಾರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ವಾಹನ ಬಿಡುಗಡೆಗೆ ಟೋಲ್ ಗೇಟ್ ಸಿಬ್ಬಂದಿ ತೀವ್ರ ತಡ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ತುರ್ತಾಗಿ ಪ್ರಯಾಣಿಸಬೇಕಿದ್ದ ವಾಹನ ಸವಾರರು ಟೋಲ್ ಗೇಟ್ ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆನ್ನಲಾಗಿದೆ. ಇದರಿಂದಾಗಿ ಮಾತಿಗೆ ಮಾತು ಬೆಳೆದು ಟೋಲ್ ಗೇಟ್ ಸಿಬ್ಬಂದಿ ವಾಹನ ಸವಾರರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಚಳ್ಳಕೆರೆಯ ಶಿವರಾಜು, ರಾಜೇಶ್‌ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಇವರಿಬ್ಬರನ್ನು ಚಳ್ಳಕೆರೆ ತಾಲೂಕಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಘಟನೆಯ ವಿಡಿಯೋ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಕಣ್ಣ ಮುಂದೆಯೇ ಬಾಲಕನಿಗೆ ವಿದ್ಯುತ್ ಶಾಕ್ ಹೊಡೆದರೂ ರಕ್ಷಿಸಲು ಸಾಧ್ಯವಾಗಲಿಲ್ಲ!

ಅನೈತಿಕ ಸಂಬಂಧದ ಆರೋಪ ಹೊರಿಸಿ ಮಹಿಳೆ ಹಾಗೂ ಪುರುಷನ ಬೆತ್ತಲೆ ಮೆರವಣಿಗೆ!

ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಜೀವಂತವಾಗಿ ಪತ್ತೆ!

ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬಂದರೆ, ಮಹಿಳೆಯರ ಸಾಲ ಮನ್ನಾ | ಅನಿತಾ ಕುಮಾರಸ್ವಾಮಿ

ದಿ ನ್ಯೂಯಾರ್ಕ್ ಟೈಮ್ಸ್ ನಲ್ಲಿ ಮೋದೀಜಿಯ ಪ್ರವಾಸದ ಬಗ್ಗೆ ಯಾವುದೇ ವರದಿ ಪ್ರಕಟವಾಗಿಲ್ಲ, ವೈರಲ್ ಫೋಟೋ: ಫೇಕ್ ಪತ್ರಿಕೆ ಸ್ಪಷ್ಟನೆ

ಬಿಜೆಪಿಯ ಜನದರ್ಶನ ಯಾತ್ರೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸುತ್ತಾ ವೇದಿಕೆಯಿಂದ ಕೆಳಗೆ ಬಿದ್ದ ಬಿಜೆಪಿ ನಾಯಕ | ವಿಡಿಯೋ ವೈರಲ್

ರಾಜ್ಯದಲ್ಲಿ ಮತ್ತೊಂದು ದಲಿತ ದೌರ್ಜನ್ಯ: ಬೆಳ್ಳಂಬೆಳಗ್ಗೆ  ದಲಿತರ ಗುಡಿಸಲುಗಳನ್ನು ಧ್ವಂಸ ಮಾಡಿದ ಅಧಿಕಾರಿಗಳು

ಕಂಡ ಕಂಡಲ್ಲಿ ಪ್ಯಾಂಟ್ ಬಿಚ್ಚುವ ಬಿಜೆಪಿ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡುತ್ತೇವೆ | ಕಾಂಗ್ರೆಸ್

 

ಇತ್ತೀಚಿನ ಸುದ್ದಿ

Exit mobile version