ಪ್ರೀತ್ಸೆ.. ಪ್ರೀತ್ಸೆ.. ಎಂದು ಕಾಟ ನೀಡುತ್ತಿದ್ದ ಭಗ್ನಪ್ರೇಮಿ: ಕಿರುಕುಳ ತಾಳಲಾರದೆ 17 ವರ್ಷದ ಬಾಲಕಿ ಆತ್ಮಹತ್ಯೆ
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವಕನೊಬ್ಬ ನೀಡುತ್ತಿದ್ದ ಸತತ ಕಿರುಕುಳಕ್ಕೆ ಬೇಸತ್ತು 17 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಅಂಚೇಪಾಳ್ಯದಲ್ಲಿ ನಡೆದಿದೆ.
ಘಟನೆಯ ವಿವರ: ಅಂಚೇಪಾಳ್ಯದ ಪ್ರಕೃತಿ ಲೇಔಟ್ ನಿವಾಸಿ ತೇಜಸ್ವಿನಿ (17) ಆತ್ಮಹತ್ಯೆಗೆ ಶರಣಾದ ಬಾಲಕಿ. ಕಳೆದ ಕೆಲವು ದಿನಗಳಿಂದ ಯುವಕನೋರ್ವ ಈಕೆಯನ್ನು ‘ಪ್ರೀತಿಸುವಂತೆ’ ಪೀಡಿಸುತ್ತಿದ್ದ ಎನ್ನಲಾಗಿದೆ. ಬಾಲಕಿಗೆ ಮಾನಸಿಕವಾಗಿ ತೀವ್ರ ಕಿರುಕುಳ ನೀಡುತ್ತಿದ್ದ ಈತನ ವರ್ತನೆಯಿಂದ ಮನನೊಂದ ತೇಜಸ್ವಿನಿ, ತನ್ನ ಮನೆಯಲ್ಲೇ ನೇಣು ಹಾಕಿಕೊಂಡು ಪ್ರಾಣ ಕಳೆದುಕೊಂಡಿದ್ದಾಳೆ.
ಪೋಷಕರ ಆಕ್ರೋಶ: ತಮ್ಮ ಮಗಳ ಸಾವಿಗೆ ಆ ಯುವಕನೇ ನೇರ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಕಿರುಕುಳ ನೀಡುತ್ತಿದ್ದ ಯುವಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಆತನನ್ನು ಕೂಡಲೇ ಬಂಧಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























