ಮರುಭೂಮಿ ರಾಷ್ಟ್ರದಲ್ಲಿ ಧಾರಾಕಾರ ಮಳೆ: ವ್ಯಾಪಕ ಪ್ರವಾಹ ಸೃಷ್ಟಿ - Mahanayaka
11:07 PM Thursday 30 - October 2025

ಮರುಭೂಮಿ ರಾಷ್ಟ್ರದಲ್ಲಿ ಧಾರಾಕಾರ ಮಳೆ: ವ್ಯಾಪಕ ಪ್ರವಾಹ ಸೃಷ್ಟಿ

dubhi
17/04/2024

ಅಬುಧಾಬಿ: ಮರುಭೂಮಿ ರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯ ಪರಿಣಾಮ ದೇಶದ ಸುತ್ತಲೂ ವ್ಯಾಪಕ ಪ್ರವಾಹ ಸೃಷ್ಟಿಯಾಗಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್‌ನಾದ್ಯಂತ (UAE) ಧಾರಾಕಾರ ಮಳೆಯಾಗಿದೆ. ಮಳೆಯ ಪರಿಣಾಮ ದುಬೈನ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನದಿಯಂತಾಗಿದೆ.

ನಿಲ್ದಾಣದಲ್ಲೇ ತೊರೆಯಂತೆ ನೀರು ಹರಿಯುತ್ತಿದ್ದರಿಂದ ವಿಮಾನ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ದುಬೈನಲ್ಲಿನ ಪ್ರವಾಹ ದೃಶ್ಯದ ವೀಡಿಯೋ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದುಬೈ ವಿಮಾನ ನಿಲ್ದಾಣದಲ್ಲಿ ನೆರೆಯ ಪರಿಸ್ಥಿತಿ ನಿರ್ಮಾಣವಾಗಿರುವ ಕಾರಣ ಭಾರತ, ಪಾಕಿಸ್ತಾನ, ಸೌದಿ ಮತ್ತು ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ ಹಲವು ದೇಶಗಳಿಗೆ ಏಪ್ರಿಲ್ 16 ರಂದು ವಿಮಾನಗಳ ಕಾರ್ಯಾಚರಣೆ ವಿಳಂಬವಾಯಿತು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ