ಚಿಕ್ಕಮಗಳೂರಿನಲ್ಲಿ ಭಾರೀ ಗಾಳಿ ಸಹಿತ ಧಾರಾಕಾರ ಮಳೆ

13/04/2024
ಚಿಕ್ಕಮಗಳೂರು: ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರಿನ ಮಲೆನಾಡು ತಾಲೂಕಿನಲ್ಲಿ ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.
ಮೂಡಿಗೆರೆ, ಕೊಪ್ಪ, ಜಯಪುರ, ಬಾಳೆಹೊನ್ನೂರಲ್ಲಿ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ನಗರ , ಮಲ್ಲೇನಹಳ್ಳಿ , ಖಾಂಡ್ಯ, ಮುತ್ತೋಡಿ ಭಾಗದಲ್ಲಿ ಭಾರೀ ಮಳೆಯಾಗಿದೆ.
ಒಂದು ಗಂಟೆಗಳ ಮಳೆ ಭರ್ಜರಿಯಾಗಿ ಸುರಿದಿದ್ದು, 3 ದಿನಗಳಿಂದ ಸಂಜೆ ವೇಳೆ ನಿರಂತರವಾಗಿ ಮಳೆ ಸುರಿಯುತ್ತಿದೆ.
ಬಯಲುಸೀಮೆ ತರೀಕೆರೆ, ಕಡೂರಿನಲ್ಲಿ ಸಾಧಾರಣ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಬಿಸಿಲ ಝಳಕ್ಕೆ ಕಂಗಲಾಗಿದ್ದ ಜನಕ್ಕೆ ಮಳೆ ರಿಲೀಫ್ ನೀಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth