ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಎದೆ ಸ್ಪರ್ಶಿಸಿ ಪರಾರಿಯಾದ ಕಾಮುಕ: ವಿಡಿಯೋ ವೈರಲ್ - Mahanayaka

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಎದೆ ಸ್ಪರ್ಶಿಸಿ ಪರಾರಿಯಾದ ಕಾಮುಕ: ವಿಡಿಯೋ ವೈರಲ್

kishan singh
12/11/2024

ಡೆಹ್ರಾಡೂನ್: ರಸ್ತೆಯಲ್ಲಿ ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಎದೆ ಸ್ಪರ್ಶಿಸಿ ಕಿರುಕುಳ ನೀಡಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 7ರಂದು ಈ ಘಟನೆ ನಡೆದಿದೆ. ಮಹಿಳೆಯೊಬ್ಬರು ರಸ್ತೆಯಲ್ಲಿ ಮಕ್ಕಳೊಂದಿಗೆ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ಎದುರಿನಿಂದ ಸ್ಕೂಟಿಯಲ್ಲಿ ಬಂದ ಯುವಕ ಮಹಿಳೆಯ ಸಮೀಪ ಬರುತ್ತಿದ್ದಂತೆಯೇ ಎದೆಯನ್ನು ಸ್ಪರ್ಶಿಸಿ, ಅಸಭ್ಯವಾಗಿ ವರ್ತಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ವಿಡಿಯೋವನ್ನು @SachinGuptaUP ಎಂಬ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿತ್ತು. ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದ್ದು, ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಕಿಶನ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ