2:21 PM Friday 11 - September 2026

ಚಿಕ್ಕಮಗಳೂರಿನಲ್ಲಿ ಮುಂದುವರಿದ ಪ್ರವಾಸಿಗರ ಹುಚ್ಚಾಟ: ಮಧ್ಯರಾತ್ರಿ ರಸ್ತೆಯಲ್ಲೇ ಮೋಜು–ಮಸ್ತಿ!

chikkamagaluru
11/09/2026

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಪ್ರವಾಸಿಗರ ಮಿತಿಮೀರಿದ ವರ್ತನೆ ಹಾಗೂ ಹುಚ್ಚಾಟಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸ್ಥಳೀಯ ನಿವಾಸಿಗಳ ಕೆಂಗಣ್ಣಿಗೆ ಗುರಿಯಾಗಿವೆ. ಇದಕ್ಕೆ ಸಾಕ್ಷಿಯಂಬಂತೆ ಚಿಕ್ಕಮಗಳೂರು ನಗರದ ಹೊರವಲಯದ ಗಾಲ್ಫ್ ರಸ್ತೆಯಲ್ಲಿ ಮತ್ತೊಂದು ಅಸಭ್ಯ ವರ್ತನೆಯ ಘಟನೆ ವರದಿಯಾಗಿದೆ.

ಪ್ರವಾಸಿಗರು ತಾವು ಬಂದಿದ್ದ ಟಿಟಿ (Traveller) ವಾಹನವನ್ನು ಮಧ್ಯ ರಸ್ತೆಯಲ್ಲೇ ನಿಲ್ಲಿಸಿ ಸಂಪೂರ್ಣವಾಗಿ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.

ಮದ್ಯದ ಅಮಲಿನಲ್ಲಿ ತೇಲಾಡುತ್ತಿದ್ದ ಸುಮಾರು 20 ರಿಂದ 30 ಜನರ ಗುಂಪು, ಮಧ್ಯರಾತ್ರಿ ರಸ್ತೆ ಬದಿಯೇ ದೊಡ್ಡದಾಗಿ ಸ್ಪೀಕರ್ ಹಾಗೂ ಮೈಕ್ ಹಾಕಿಕೊಂಡು ಜೋರಾಗಿ ಸದ್ದು ಮಾಡುತ್ತಾ ಹುಚ್ಚಾಟ ಮೆರೆದಿದ್ದಾರೆ.

ಶಾಂತಿಯುತವಾದ ಜನವಸತಿ ಪ್ರದೇಶದಲ್ಲಿ ಈ ರೀತಿಯ ಅತಿವರ್ತನೆ, ಜೋರಾದ ಕೂಗಾಟ ಮತ್ತು ಅರಚಾಟದಿಂದ ಸ್ಥಳೀಯರಿಗೆ ತೀವ್ರ ತೊಂದರೆಯಾಗಿದೆ.

ಮಧ್ಯರಾತ್ರಿಯಲ್ಲಿ ಪ್ರವಾಸಿಗರು ನಡೆಸಿದ ಈ ರೀತಿಯ ಅಕ್ರಮ ಮೋಜು–ಮಸ್ತಿ ಹಾಗೂ ಅಸಭ್ಯ ವರ್ತನೆಯನ್ನು ಕಂಡು ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರವಾಸಿಗರ ಪುಂಡಾಟಿಕೆಗೆ ಕಡಿವಾಣ ಹಾಕಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version