ಎಳನೀರಿಗೆ ಚರಂಡಿ ನೀರು ಚಿಮುಕಿಸಿದ ವ್ಯಾಪಾರಿ: ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಅರೆಸ್ಟ್ - Mahanayaka

ಎಳನೀರಿಗೆ ಚರಂಡಿ ನೀರು ಚಿಮುಕಿಸಿದ ವ್ಯಾಪಾರಿ: ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಅರೆಸ್ಟ್

samer
06/06/2023


Provided by

ನೋಯ್ಡಾ: ಎಳೆನೀರು ಮಾರಾಟಗಾರನೋರ್ವ ಚರಂಡಿ ನೀರನ್ನು ಎಳೆನೀರಿನ ಮೇಲೆ ಹಾಕುತ್ತಿರುವ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ವೈರಲ್ ಆದ ಬೆನ್ನಲ್ಲೇ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ವಿಡಿಯೋ ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಳೆನೀರು ವ್ಯಾಪಾರಿಯನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಬಿಸ್ರಖ್ ಪೊಲೀಸ್ ಠಾಣೆಯ ಅಧಿಕಾರಿ ಅನಿಲ್ ಕುಮಾರ್ ರಜಪೂತ್ ಪಿಟಿಐಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಸಮೀರ್ (28) ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 270( ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಮಾರಣಾಂತಿಕ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ