ಬೈಕ್ ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸ್: ಬೈಕ್ ನಿಂದ ಬಿದ್ದು 3 ವರ್ಷದ ಬಾಲಕಿ ಸಾವು - Mahanayaka

ಬೈಕ್ ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸ್: ಬೈಕ್ ನಿಂದ ಬಿದ್ದು 3 ವರ್ಷದ ಬಾಲಕಿ ಸಾವು

mandya
26/05/2025

ಮಂಡ್ಯ: ಚಲಿಸುತ್ತಿದ್ದ ಬೈಕ್ ನ್ನು ಏಕಾಏಕಿ ಟ್ರಾಫಿಕ್ ಪೊಲೀಸ್ ಅಡ್ಡಗಟ್ಟಿದ್ದು, ಪರಿಣಾಮವಾಗಿ ಬೈಕ್ ನಲ್ಲಿದ್ದ ಮಗು ರಸ್ತೆಗೆ ಅಪ್ಪಳಿಸಿ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಸ್ವರ್ಣಸಂದ್ರದ ಬಳಿ ನಡೆದಿದೆ.

ಮೃತ ಮಗುವನ್ನು ರಿತ್ವಿಕ್ಷಾ(3) ಎಂದು ಗುರುತಿಸಿದ್ದು, ಸ್ಥಳದಲ್ಲಿ ಸಾರ್ವಜನಿಕರು ಪೊಲೀಸರ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ.

ಮಂಡ್ಯದ ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ರಿತ್ವಿಕ್ಷಾ ತನ್ನ ತಂದೆ–ತಾಯಿಯ ಜೊತೆ ಬೈಕ್ ​ನಲ್ಲಿ ತೆರಳುತ್ತಿದ್ದನು. ಈ ವೇಳೆ ಸ್ವರ್ಣಸಂದ್ರದ ಬಳಿ ಟ್ರಾಫಿಕ್​ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬೈಕ್​ನ್ನು ಅಡ್ಡಗಟ್ಟಲು ಯತ್ನಿಸಿದ್ದಾರೆ. ಈ ವೇಳೆ ಬೈಕ್​ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ರಿತ್ವಿಕ್ಷಾ ತಲೆಗೆ ತೀವ್ರ ಗಾಯವಾಗಿದ್ದು. ತೀವ್ರ ರಕ್ತ ಸ್ರಾವದಿಂದ ಕಂದಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇನ್ನು ಘಟನಾ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಪೊಲೀಸರ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಮಗುವನ್ನು ಕಳೆದುಕೊಂಡ ಪೋಷಕರು ಪೊಲೀಸರಿಗೆ ಹಿಡಿಶಾಪ ಹಾಕುತ್ತಿದ್ದು. ಮಂಡ್ಯದ ಮಿಮ್ಸ್​ ಆಸ್ಪತ್ರೆ ಮುಂಭಾಗ ಮಗುವಿನ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

<

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ