ಚಿಕ್ಕಮಗಳೂರು: ಹೃದಯಾಘಾತಕ್ಕೆ 22 ವರ್ಷದ ವಿದ್ಯಾರ್ಥಿನಿ ಸಾವು
Final year student dies of cardiac arrest in Sringeri– ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿ ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ.
ದಿಶಾ ಅವರು ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಇಂದು ಹಾಸ್ಟೆಲ್‌ನಲ್ಲಿದ್ದ ವೇಳೆ ಹಠಾತ್ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಸಹಪಾಠಿಗಳು ನೆರವಿಗೆ ಧಾವಿಸಿದರೂ, ಅದಾಗಲೇ ದಿಶಾ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಮೃತ ದಿಶಾ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಅಕಾಲಿಕ ಸಾವಿನ ಸುದ್ದಿ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಕುಟುಂಬದವರಲ್ಲಿ ತೀವ್ರ ದುಃಖ ಮತ್ತು ಆಘಾತವನ್ನುಂಟುಮಾಡಿದೆ.
ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























