ಗೋವಾ: ನೈಟ್​​ ಕ್ಲಬ್‌ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ 25 ಮಂದಿ ಸಾವು

goa gas cylinder blast
07/12/2025

ಗೋವಾ: ಉತ್ತರ ಗೋವಾದ ಅರ್‌ ಪೋರಾದಲ್ಲಿರುವ ನೈಟ್​​ ಕ್ಲಬ್‌ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 25 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮಧ್ಯರಾತ್ರಿ  ಅಡುಗೆ ಕೋಣೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಿಸಿದ ಪರಿಣಾಮ ನೈಟ್ ಕ್ಲಬ್ ಹೊತ್ತಿ ಉರಿದಿದೆ. ಪರಿಣಾಮವಾಗಿ ಹಲವರು ಸಜೀವ ದಹನವಾಗಿದ್ದಾರೆ. ಸಾಕಷ್ಟು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರಲ್ಲಿ ಹೆಚ್ಚಿನವರು ಕ್ಲಬ್‌ ನ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದವರಾಗಿದ್ದು, ಆ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಮೃತರಲ್ಲಿ ಮೂರರಿಂದ ನಾಲ್ಕು ಮಂದಿ ಪ್ರವಾಸಿಗರು ಕೂಡ ಇರುವ ಮಾಹಿತಿ ಸಿಕ್ಕಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ನೈಟ್‌ ಕ್ಲಬ್​​ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರೋದೇ ಹೆಚ್ಚಿನ ಅವಘಡಕ್ಕೆ ಕಾರಣವಾಗಿದೆ. ಗೋವಾ ರಾಜಧಾನಿ ಪಣಜಿಯಿಂದ ಸುಮಾರು 25 ಕಿ.ಮೀ. ದೂರದಲ್ಲಿರುವ ಅರ್‌ ಪೋರಾ ಗ್ರಾಮದಲ್ಲಿ ಈ ಜನಪ್ರಿಯ ನೈಟ್ ​​ಕ್ಲಬ್​​​ ಕಳೆದ ವರ್ಷ ಆರಂಭವಾಗಿತ್ತು. ಎಲ್ಲ 23 ಶವಗಳನ್ನು ಘಟನಾ ಸ್ಥಳದಿಂದ ಹೊರತೆಗೆಯಲಾಗಿದ್ದು, ಬಾಂಬೊಲಿಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version