ಲಿಫ್ಟ್ ನಲ್ಲಿ ಸಿಲುಕಿ ಕೆಜಿಎಫ್ ಸಹ–ನಿರ್ದೇಶಕನ ಪುತ್ರ ದಾರುಣ ಸಾವು
ಹೈದರಾಬಾದ್: ‘ಕೆಜಿಎಫ್’ ಮತ್ತು ‘ಸಲಾರ್’ ಚಿತ್ರಗಳಲ್ಲಿ ಸಹ–ನಿರ್ದೇಶಕರಾಗಿ ಕೆಲಸ ಮಾಡಿರುವ ಕೀರ್ತನ್ ನಾಡಗೌಡ ಅವರ ನಾಲ್ಕು ವರ್ಷದ ಮಗ ಚಿರಂಜೀವಿ ಸೋನಾರ್ಷ್ ದಾರುಣವಾಗಿ ಮೃತಪಟ್ಟಿದ್ದಾನೆ.
ಹೈದರಾಬಾದ್ ನಲ್ಲಿ ಸೋಮವಾರ ಆಕಸ್ಮಿಕವಾಗಿ ಲಿಫ್ಟ್ ನಲ್ಲಿ ಸಿಲುಕಿಕೊಂಡ ಮಗು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದೆ.
ವರದಿಗಳ ಪ್ರಕಾರ, ಮಗು ಯಾರಿಗೂ ತಿಳಿಯದಂತೆ ಲಿಫ್ಟ್ ಒಳಗೆ ಹೋಗಿದ್ದು, ಆಕಸ್ಮಿಕವಾಗಿ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದೆ. ಮಗುವನ್ನು ರಕ್ಷಿಸಲು ತಕ್ಷಣ ಪ್ರಯತ್ನಿಸಲಾಯಿತಾದರೂ, ಅಷ್ಟರಲ್ಲಾಗಲೇ ತೀವ್ರವಾಗಿ ಗಾಯಗೊಂಡಿದ್ದ ಸೋನಾರ್ಷ್ ಮೃತಪಟ್ಟಿದ್ದಾನೆ.
ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಟ್ವೀಟ್ ಮಾಡಿ, “ಚಿಕ್ಕ ಮಗುವಿನ ಸಾವು ಅತ್ಯಂತ ಹೃದಯವಿದ್ರಾವಕ, ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ” ಎಂದು ಸಂತಾಪ ಸೂಚಿಸಿದ್ದಾರೆ. ಪ್ರಶಾಂತ್ ನೀಲ್ ಅವರ ತಂಡದಲ್ಲಿ ಗುರುತಿಸಿಕೊಂಡಿದ್ದ ಕೀರ್ತನ್ ಸದ್ಯ ಹೊಸ ಚಿತ್ರದ ಸಿದ್ಧತೆಯಲ್ಲಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























