2:52 AM Thursday 23 - October 2025

ಕೈಯಲ್ಲೇ ಮೊಬೈಲ್ ಸ್ಫೋಟ: 8 ವರ್ಷದ ಬಾಲಕಿಯ ದುರಂತ ಸಾವು

keralla
25/04/2023

ಕೇರಳ: ಮೊಬೈಲ್ ಬಳಸಿ ವಿಡಿಯೋ ನೊಡುತ್ತಿದ್ದ ವೇಳೆ ಮೊಬೈಲ್ ಸ್ಪೋಟಗೊಂಡು 8 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ಕೇರಳದ ತ್ರಿಶ್ಯೂರ್ ಜಿಲ್ಲೆಯಲ್ಲಿ ತರುವಿಲ್ವಾಮಲ ಎಂಬಲ್ಲಿ ನಡೆದಿದೆ.

ಮೃತ ಬಾಲಕಿಯನ್ನುಆದಿತ್ಯ ಶ್ರೀ ಎಂದು ಗುರುತಿಸಲಾಗಿದೆ. ಬಾಲಕಿಯು ಮೊಬೈಲ್ ನಲ್ಲಿ ವಿಡಿಯೋ ನೊಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಬಾಲಕಿಯ ಕೈನಲ್ಲಿದ್ದ ಮೊಬೈಲ್ ಸ್ಫೋಟಗೊಂಡಿದ್ದರಿಂದ ಕೈ ಹಾಗೂ ಮುಖಕ್ಕೆ ಗಂಭೀರ ಗಾಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಬಾಲಕಿಯನ್ನು ಅಶೋಕ್ ಕುಮಾರ್ ಹಾಗೂ ಸೌಮ್ಯ ದಂಪತಿಯ ಪುತ್ರಿ ಎಂದು ಗುರುತಿಸಲಾಗಿದೆ. ಘಟನೆಯ ವೇಳೆ ಬಾಲಕಿ ಮತ್ತುಆಕೆಯ ಅಜ್ಜಿ ಮಾತ್ರ ಮನೆಯಲ್ಲಿ ಇದ್ದರು ಎನ್ನಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ ಅಧಿಕ ಸಮಯ ಮೊಬೈಲ್ ನಲ್ಲಿ ವೀಡಿಯೊ ನೋಡಿದ್ದರ ಪರಿಣಾಮ ಮೊಬೈಲ್ ಬಿಸಿಯಾಗಿ ಸ್ಫೋಟಗೊಂಡಿರಬಹುದು ಎಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿಗಳು ಪೊರೆನ್ಸಿಕ್ ವರದಿಯ ನಂತರ ತಿಳಿದು ಬರಬೇಕಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version