4:13 AM Wednesday 14 - January 2026

ತಾನು ಸಾಯುವುದಾಗಿ ಪತ್ನಿಯನ್ನು ಹೆದರಿಸಲು ಹೋದ ಪತಿ, ನೇಣಿಗೆ ಸಿಲುಕಿ ಸಾವು!

amith kumar
16/05/2024

ಬೆಂಗಳೂರು:  ತಾನು ಸಾಯುತ್ತಿರುವುದಾಗಿ ಪತ್ನಿಯನ್ನು ಹೆದರಿಸಲು ಹೋದ ಪತಿಯೋರ್ವ ನೇಣಿಗೆ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಿಹಾರ ಮೂಲದ ಅಮಿತ್ ಕುಮಾರ್ (28) ಮೃತಪಟ್ಟ ವ್ಯಕ್ತಿಯಾಗಿದ್ದು, ಇವರು ಜಿಮ್ ಟ್ರೈನರ್ ಆಗಿದ್ದರು. 10 ವರ್ಷಗಳ ಹಿಂದೆ ಕೆಲಸ ಹುಡುಕಿ ಬಿಹಾರದಿಂದ ಬೆಂಗಳೂರಿಗೆ ಬಂದಿದ್ದ. ವರ್ಷದ ಹಿಂದೆ ಯುವತಿಯನ್ನು ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ ವಿವಾಹವಾಗಿದ್ದ.

ಪತ್ನಿ ನರ್ಸಿಂಗ್ ಕೋರ್ಸ್ ಗೆ ಸೇರಿದ್ದಳು. ಪತಿ-ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಮುನಿಸಿಕೊಂಡು ತವರಿಗೆ ಹೋಗಿದ್ದಳು. ಪತ್ನಿಯನ್ನು ಮನವೊಲಿಸಿ ವಾಪಾಸ್ ಕರೆತರಲು ಅಮಿತ್ ಕುಮಾರ್ ಸಾಕಷ್ಟು ಪ್ರಯತ್ನಿಸಿದ್ದಾನೆ. ಅದೇ ರೀತಿ ಪತ್ನಿಗೆ ವಿಡಿಯೋ ಕಾಲ್ ಮಾಡಿ ತಾನು ನೇಣು ಬಿಗಿದುಕೊಳ್ಳುತ್ತಿದ್ದೇನೆ ಎಂದು ಹೆದರಿಸಲು ಹೋಗಿದ್ದಾನೆ.

ಈ ವೇಳೆ ಆಕಸ್ಮಿಕವಾಗಿ ಅಮಿತ್ ಕುಮಾರ್ ಕತ್ತಿಗೆ ನೇಣಿನ ಹಗ್ಗ ಬಿಗಿದಿದ್ದು, ಪತ್ನಿಯ ಜೊತೆ ವಿಡಿಯೋ ಕಾಲ್ ನಲ್ಲಿ ಇರುವಾಗಲೇ ಅಮಿತ್ ಕುಮಾರ್ ಸಾವನ್ನಪ್ಪಿದ್ದಾನೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ

Exit mobile version