ಗೂಡ್ಸ್ ರೈಲುಗಳ ಮುಖಾಮುಖಿ ಡಿಕ್ಕಿ: ರೈಲು ಚಾಲಕ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ

ಎರಡು ಗೂಡ್ಸ್ ರೈಲುಗಳು ಡಿಕ್ಕಿ ಹೊಡೆದ ಪರಿಣಾಮ ಓರ್ವ ಲೋಕೋ ಚಾಲಕ ಸಾವನ್ನಪ್ಪಿ, ಇಬ್ಬರು ಸಿಬ್ಬಂದಿ ಗಾಯಗೊಂಡ ಘಟನೆ ಮಧ್ಯಪ್ರದೇಶದ ಸಿಂಗ್ ಪುರ ರೈಲು ನಿಲ್ದಾಣದ ಬಳಿ ನಡೆದಿದೆ.
ಬಿಲಾಸ್ ಪುರದಿಂದ ಕಟ್ನಿ ರೈಲು ಮಾರ್ಗದಲ್ಲಿ ಶಾಹದೋಲ್ ಗೆ 10 ಕಿ.ಮೀ. ದೂರದಲ್ಲಿ ಗೂಡ್ಸ್ ರೈಲುಗಳು ಪರಸ್ಪರ ಡಿಕ್ಕಿ ಹೊಡೆದವು. ಅಪಾಘತದ ತೀವ್ರತೆಗೆ ರೈಲುಗಳ ಎಂಜಿನ್ ಗಳು ಬೆಂಕಿಗೆ ಆಹುತಿಗಾಗಿದ್ದು, ಇಬ್ಬರು ರೈಲು ಕಾರ್ಮಿಕರು ಬೋಗಿಗಳ ನಡುವೆ ಸಿಲುಕಿಕೊಂಡಿರುವ ಸಂಶಯ ವ್ಯಕ್ತವಾಗಿದೆ.
ಬೆಳಗ್ಗೆ 6:30ಕ್ಕೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದ್ದು, ರೈಲ್ವೇ ಉನ್ನತ ಅಧಿಕಾರಿಗಳು ಸ್ಧಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ನಂತರ, ಬಿಲಾಸ್ ಪುರ-ಕಟ್ನಿ ಮಾರ್ಗವಾಗಿ ಸಂಚರಿಸಬೇಕಾಗಿದ್ದ, ಎಲ್ಲಾ ರೈಲುಗಳ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw