ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ; ರೈಲ್ವೆ ಸಚಿವರ ಭೇಟಿ, ತನಿಖೆಗೆ ಆದೇಶ - Mahanayaka
10:58 AM Wednesday 20 - August 2025

ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ; ರೈಲ್ವೆ ಸಚಿವರ ಭೇಟಿ, ತನಿಖೆಗೆ ಆದೇಶ

guwati
14/01/2022


Provided by

ಗುವಾಹಟಿ: ಕಳೆದ ರಾತ್ರಿ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಡೊಮೊಹನಿ ಎಂಬಲ್ಲಿ ನಡೆದ ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ ವಕ್ತಾರ ತಿಳಿಸಿದ್ದಾರೆ.

ಬಿಕಾನೇರ್-ಗುವಾಹಟಿ ಎಕ್ಸ್‌ಪ್ರೆಸ್ ರೈಲಿನ 12 ಬೋಗಿಗಳು ನಿನ್ನೆ ಜಲ್ಪೈಗುರಿ ಜಿಲ್ಲೆಯ ದೊಮೊಹಾನಿ ಬಳಿ ಹಳಿತಪ್ಪಿ ಮಗುಚಿ ಬಿದ್ದವು. ಘಟನೆಯಲ್ಲಿ ಗಾಯಗೊಂಡವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಮೃತಪಟ್ಟವರಲ್ಲಿ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ. ಅಲ್ಲದೆ, ಜಲ್ಪೈಗುರಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 23 ಪ್ರಯಾಣಿಕರು ಚಿಕಿತ್ಸೆ ಪಡೆಯುತ್ತಿದ್ದರೆ, ಆರು ಮಂದಿ ಉತ್ತರ ಬಂಗಾಳ ವೈದ್ಯಕೀಯ ಕಾಲೇಜಿಗೆ ಮತ್ತು ಏಳು ಮಂದಿ ಮೇನಗುರಿ ಗ್ರಾಮೀಣ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಈಶಾನ್ಯ ವಲಯ ರೈಲ್ವೆ ಮುಖ್ಯ ಸಾರ್ವಜನಿಕ ವಲಯ ಸಂಪರ್ಕಾಧಿಕಾರಿ ಗುನೀತ್ ಕೌರ್ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಇಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈಶಾನ್ಯ ವಲಯ ಪ್ರಧಾನ ವ್ಯವಸ್ಥಾಪಕ ಅನ್ಶುಲ್ ಗುಪ್ತಾ ಇಂದು ಮಧ್ಯರಾತ್ರಿ 12.08 ಗಂಟೆಗೆ ಸ್ಥಳಕ್ಕೆ ತಲುಪಿ ರೈಲು ಸಂಚಾರವನ್ನು ಸಾಮಾನ್ಯಗೊಳಿಸಲು ಹಳಿಗಳ ಮರುಸ್ಥಾಪನೆ ಕಾರ್ಯವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸ್ಥಳದಲ್ಲಿ ಪ್ರಯಾಣಿಕರ ಪರಿಹಾರ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಗುನೀತ್ ಕೌರ್ ಹೇಳಿದ್ದಾರೆ.

ಪ್ರಾಥಮಿಕ ತನಿಖೆ ಪ್ರಕಾರ, ಎಂಜಿನ್ ಉಪಕರಣಗಳಲ್ಲಿ ದೋಷವೇ ಅಪಘಾತಕ್ಕೆ ಕಾರಣ ಎಂದು ಕಂಡುಬಂದಿದ್ದು, ರೈಲ್ವೆ ಸುರಕ್ಷತಾ ಆಯೋಗ ಅಪಘಾತಕ್ಕೆ ನಿಖರ ಮೂಲ ಕಾರಣದ ತನಿಖೆ ನಡೆಸಲಿದೆ. ದುರ್ಘಟನೆ ಬಗ್ಗೆ ಶಾಸನಬದ್ಧ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ. ಪ್ರಧಾನಿ ಮೋದಿಯವರು ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ನಾನು ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಪರಿಹಾರ ಘೋಷಣೆ: ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಮತ್ತು ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 50 ಸಾವಿರ ರೂ. ಹಾಗೂ ಸಣ್ಣಪುಟ್ಟ ಗಾಯಗಳಿಂದ ಪಾರಾದವರಿಗೆ ತಲಾ 25 ಸಾವಿರ ರೂ. ಪರಿಹಾರ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ; ರೈಲ್ವೆ ಸಚಿವರ ಭೇಟಿ, ತನಿಖೆಗೆ ಆದೇಶ

ಕ್ರೈಸ್ತ ಸನ್ಯಾಸಿನಿಯ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೋ ಮುಳಯ್ಕಲ್ ತಪ್ಪಿತಸ್ಥನಲ್ಲ; ಕೋರ್ಟ್

ಬಾಗ್ದಾದ್: ಯುಎಸ್ ರಾಯಭಾರ ಕಚೇರಿಯ ಮೇಲೆ ರಾಕೆಟ್ ದಾಳಿ

ನಿದ್ದೆಗೆ ಜಾರಿದ ಕಾರು ಚಾಲಕ:  ಭೀಕರ ಅಪಘಾತದಲ್ಲಿ 7 ಮಂದಿ ಸಾವು

ಕಳ್ಳನನ್ನು 1 ಕಿ.ಮೀ. ದೂರ ಬೆನ್ನಟ್ಟಿ ಹಿಡಿದ ಪೊಲೀಸ್ | ವಿಡಿಯೋ ವೈರಲ್

 

ಇತ್ತೀಚಿನ ಸುದ್ದಿ