ಪುಣೆಯಲ್ಲಿ ತರಬೇತಿ ವಿಮಾನ ಪತನ; ಪೈಲಟ್, ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯ - Mahanayaka
2:25 AM Thursday 23 - October 2025

ಪುಣೆಯಲ್ಲಿ ತರಬೇತಿ ವಿಮಾನ ಪತನ; ಪೈಲಟ್, ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯ

19/10/2023

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಗ್ರಾಮವೊಂದರ ಬಳಿ ಗುರುವಾರ ಸಂಜೆ ತರಬೇತಿ ವಿಮಾನ ಅಪಘಾತಕ್ಕೀಡಾಗಿದೆ. ಖಾಸಗಿ ವಿಮಾನ ತರಬೇತಿ ಅಕಾಡೆಮಿಗೆ ಸೇರಿದ ವಿಮಾನದಲ್ಲಿದ್ದ ಪೈಲಟ್ ಮತ್ತು ಇನ್ನೋರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪಶ್ಚಿಮ ಮಹಾರಾಷ್ಟ್ರದ ಬಾರಾಮತಿ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ.

ರೆಡ್ ಬರ್ಡ್ ಸಂಸ್ಥೆಗೆ (ರೆಡ್ ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿ) ಸೇರಿದ ತರಬೇತಿ ವಿಮಾನವು ಬಾರಾಮತಿ ತಾಲ್ಲೂಕಿನ ಕಟ್ಫಾಲ್ ಗ್ರಾಮದ ಬಳಿ ಸಂಜೆ 5 ಗಂಟೆ ಸುಮಾರಿಗೆ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಪೈಲಟ್ ಮತ್ತು ಇನ್ನೋರ್ವ ವ್ಯಕ್ತಿ ಸಹ ಪೈಲಟ್ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಬಾರಾಮತಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪ್ರಭಾಕರ್ ಮೋರೆ ತಿಳಿಸಿದ್ದಾರೆ.

ಅಪಘಾತಕ್ಕೆ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿ