ಬ್ಯಾಂಕ್ ಖಾತೆಗೆ ಕನ್ನ: ಆಸ್ತಿ ನೋಂದಣಿ ಮಾಡಿದವರ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ: ಮೂವರು ಅರೆಸ್ಟ್
29/10/2023
ಆಸ್ತಿ ನೋಂದಣಿ ಮಾಡಿದವರ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಕೇಸ್- ಮೂವರು ಖತರ್ನಾಕ್ ಆರೋಪಿಗಳು ಅರೆಸ್ಟ್
ಆಧಾರ್ ಎನೇಬಲ್ಡ್ ಪೇಮೆಂಟ್ ವ್ಯವಸ್ಥೆ (AEPS)ಯಡಿ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿದ ಹಲವರ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಬಿಹಾರ ಮೂಲದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ದೀಪಕ್ ಕುಮಾರ್ ಹೆಂಬ್ರಮ್ (33), ವಿವೇಕ್‌ಕುಮಾರ್ ಬಿಸ್ವಾಸ್ (24), ಮದನ್ ಕಮಾರ್ (23) ಎಂದು ಗುರುತಿಸಲಾಗಿದೆ.
ಆರೋಪಿಗಳಿಗೆ ಸಂಬಂಧಿಸಿದ 10 ಬ್ಯಾಂಕ್ ಖಾತೆಗಳಿಂದ 3,60,242 ರೂ.ಗಳ ವಹಿವಾಟು ಸ್ಥಗಿತಗೊಳಿಸಲಾಗಿದ್ದು, ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ತಾಂತ್ರಿಕ ಪರಿಶೀಲನೆಗೊಳಪಡಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ತಿಳಿಸಿದ್ದಾರೆ.




























