ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ:  ಪ್ರತಿ ಹುದ್ದೆಗೂ ರೇಟ್ ಫಿಕ್ಸ್: ಹೆಚ್.ಡಿ.ಕುಮಾರಸ್ವಾಮಿ - Mahanayaka
11:49 AM Wednesday 22 - October 2025

ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ:  ಪ್ರತಿ ಹುದ್ದೆಗೂ ರೇಟ್ ಫಿಕ್ಸ್: ಹೆಚ್.ಡಿ.ಕುಮಾರಸ್ವಾಮಿ

h d kumaraswamy
08/06/2023

ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ ಕಾಂಗ್ರೆಸ್ ನಾಯಕರು ಈಗ ಪ್ರತಿ ಹುದ್ದೆಗೆ ರೇಟ್ ಫಿಕ್ಸ್ ಮಾಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳ ಬಗ್ಗೆ ಇವರೇ ಪೇ ಸಿಎಂ ಎಂದು ಪ್ರಚಾರ ಮಾಡಿದರು. ಆದರೆ, ಅದಕ್ಕಿಂತ ಜಾಸ್ತಿ ಈ ಸರಕಾರ ನಡೆಯುತ್ತಿದೆ. ಇದನ್ನು ಎಷ್ಟು ಪರ್ಸೆಂಟ್ ಸರಕಾರ ಎಂದು ಕರೆಯಬೇಕು? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಪೇ ಸಿಎಂ ಪ್ರಚಾರ ನಡೆಸಿದ್ದ ಇವರ ಬಗ್ಗೆಯೂ ನಾವು ಹಾದಿಬೀದಿಯಲ್ಲಿ ಪ್ರಚಾರ ನಡೆಸಬೇಕಿದೆ. ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಬೇಕಿದೆ. ಸ್ವತಃ ಅಧಿಕಾರಿಗಳಲ್ಲೇ ರೇಟ್ ಫಿಕ್ಸ್ ಆಗಿದೆ ಅಂತ ಮಾತಾಡ್ತಾ ಇದ್ದಾರೆ ಎಂದು ಅವರು ದೂರಿದರು.

ಈಗ ಇವರು ಏನು ಮಾಡ್ತಾ ಇದ್ದಾರೆ ಎನ್ನುವುದನ್ನು ಜನ ಗಮನಿಸುತ್ತಿದ್ದಾರೆ. ಇದನ್ನು ಸಾಬೀತು ಮಾಡಿ ಅಂದರೆ ಹೇಗೆ ಮಾಡೋದು? ಹಿಂದೆ 40% ಆರೋಪವನ್ನು ಸಾಬೀತು ಮಾಡಿದ್ದರಾ? ಎಂದು ಪ್ರಶ್ನಿಸಿದ ಅವರು, ಈಗ ಅವರದೇ ಸರಕಾರ ಬಂದಿದೆ, ಪರ್ಸೆಂಟೇಜ್ ಆರೋಪವನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ