3:29 PM Thursday 6 - November 2025

ಕಾರಲ್ಲಿ ನಿಷೇಧಿತ ಮಾದಕ ವಸ್ತು ಚರಸ್ ಸಾಗಾಟ: ಆರೋಪಿ ಅರೆಸ್ಟ್

charas
03/08/2023

ಕಾರಲ್ಲಿ ನಿಷೇಧಿತ ಮಾದಕ ವಸ್ತು ಚರಸ್ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರಲ್ಲಿ ಬಂಧಿಸಲಾಗಿದೆ. ಅಬ್ದುಲ್ ಅಝೀಝ್(34), ಬಂಧಿತ ವ್ಯಕ್ತಿ. ಈತನಿಂದ 230.4 ಗ್ರಾಂ ತೂಕದ ಚರಸ್ ಹಾಗೂ ಸಾಗಾಟಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ನಿಂಗ್ ಸ್ಟಾರ್ ಶಾಲೆಯ ಬಳಿ ಆ.1ರಂದು ಮುಂಜಾವ 3:15ರ ಸುಮಾರಿಗೆ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ಬರುತ್ತಿದ್ದ ಕಾರನ್ನು ಪೊಲೀಸರು ನಿಲ್ಲಿಸುವಂತೆ ಸೂಚಿಸಿದ್ದಾರೆ. ಈ ವೇಳೆ ಅದರ ಚಾಲಕ ಕಾರನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದಾನೆ.

ಬಳಿಕ ಕಾರನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲಿಸಿದಾಗ 230.4 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತು ಚರಸ್ ಪತ್ತೆಯಾಗಿದೆ. ಕಾರು ಹಾಗೂ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರಿನಲ್ಲಿದ್ದ ಇನ್ನಿತರ ಆರೋಪಿತರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ‌ ಮಂಗಳೂರು ನಗರದ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮಾರ್ಗದರ್ಶನದಂತೆ, ಡಿಸಿಪಿ ಅಂಶು ಕುಮಾರ್ ಮತ್ತು ದಿನೇಶ್ ಕುಮಾರ್ ಡಿಸಿಪಿ, ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನಿರ್ದೇಶನದಂತೆ ಬಜ್ಪೆ ಪೊಲೀಸ್ ಠಾಣಾ ಪಿ.ಐ. ಪ್ರಕಾಶ್ ನೇತೃತ್ವದ ತಂಡ ಪಾಲ್ಗೊಂಡಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version