ಸೂಕ್ತ ಸಮಯಕ್ಕೆ ಸಿಗಲಿಲ್ಲ ಚಿಕಿತ್ಸೆ: ಆಸ್ಪತ್ರೆ ಮುಂಭಾಗವೇ ಕೊನೆಯುಸಿರೆಳೆದ ಮಗು!

Mahanayaka — ಚಿಕ್ಕಮಗಳೂರು: ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದ್ದು, ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಲಭಿಸದೇ ಶಿಶು ಸಾವನ್ನಪ್ಪಿದೆ.
ಕಫದ ಸಮಸ್ಯೆಯಿಂದ ತಾಲೂಕು ಆಸ್ಪತ್ರೆಗೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದ ಗಂಡು ಮಗುವನ್ನು ದಂಪತಿ ದಾಖಲಿಸಿದ್ದರು. ಆದರೆ, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚನೆ ನೀಡಲಾಗಿದೆ.
ಜಿಲ್ಲಾಸ್ಪತ್ರೆಗೆ ತೆರಳಲು ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಸಿಗದೆ ಆಸ್ಪತ್ರೆ ಮುಂಭಾಗದಲ್ಲೇ ಮಗು ಕೊನೆಯುಸಿರೆಳೆದಿದೆ.
ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಮಗು ಬಲಿಯಾಗಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕು ಆಸ್ಪತ್ರೆಯಲ್ಲಿ ಆ್ಯಂಬುಲೆನ್ಸ್ ಬರುವವರೆಗೆ ಸಿಬ್ಬಂದಿಯು ಮಗುವಿಗೆ ಕನಿಷ್ಠ ಪ್ರಾಥಮಿಕ ಚಿಕಿತ್ಸೆಯನ್ನೂ ನೀಡದೇ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಮಗುವಿನ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD