ಒಣಗಿದ್ದ ಮರಕ್ಕೆ ವಿದ್ಯುತ್ ತಂತಿ ತಗುಲಿ ಹೊತ್ತಿಕೊಂಡ ಮರ: ತಪ್ಪಿದ ಭಾರೀ ಅನಾಹುತ

ಕೊಟ್ಟಿಗೆಹಾರ: ಒಣಗಿದ್ದ ಮರಕ್ಕೆ ವಿದ್ಯುತ್ ತಂತಿ ತಗುಲಿ ಮರಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಹಾದಿಓಣಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ವಿದ್ಯುತ್ ತಂತಿಯಲ್ಲಿ ಬೆಂಕಿ ಹೊತ್ತಿಕೊಂಡಿರುವುದನ್ನು ಕಂಡ ಗ್ರಾಮ ಪಂಚಾಯತ್ ಸದಸ್ಯ ನವೀನ್ ಹಾವಳಿ ಅವರು ತಕ್ಷಣವೇ ಮೆಸ್ಕಾಂಗೆ ಕರೆ ಮಾಡಿ ಲೈನ್ ಆಫ್ ಮಾಡಿಸಿದ್ದಾರೆ. ಇದರಿಂದಾಗಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಈ ಜಾಗದಲ್ಲಿ ಸದಾ ವಾಹನಗಳ ಓಡಾಟ ಇರುತ್ತದೆ. ಮರ ಬಿದ್ದ ತಂತಿ ತುಂಡಾಗಿ ವಾಹನಗಳ ಮೇಲೆ ಬಿದ್ದಿದ್ದರೆ, ಭಾರೀ ಅನಾಹುತವೇ ನಡೆದು ಹೋಗುತ್ತಿತ್ತು. ಆದ್ರೆ, ನವೀನ್ ಅವರ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw