ಮೊದಲ ಮಳೆಗೆ ಅವಾಂತರ: ಕಾರಿನ ಮೇಲೆ ಬಿದ್ದ ಮರ

12/03/2025
ಚಿಕ್ಕಮಗಳೂರು: ಕಾಫಿನಾಡಲ್ಲಿ ಮೊದಲ ಮಳೆಗೆ ಮಳೆ ಅವಾಂತರ ಸೃಷ್ಟಿಯಾಗಿದ್ದು, ಭಾರೀ ಗಾಳಿಗೆ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕಾರಿನ ಗ್ಲಾಸ್ ಪುಡಿ—ಪುಡಿಯಾಗಿದೆ.
ಕಳಸ ತಾಲೂಕಿನ ಹಿರೇಬೈಲ್ ಗ್ರಾಮದ ಬಳಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳಸದಿಂದ ಬೆಂಗಳೂರಿಗೆ ಕಾರು ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಮರ ಬಿದ್ದ ಪರಿಣಾಮ ಕಾರಿನ ಇಂದಿನ ಗ್ಲಾಸ್ ಸಂಪೂರ್ಣ ಪುಡಿ—ಪುಡಿಯಾಗಿದೆ. ಸ್ಥಳಕ್ಕೆ ಕಳಸ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: