1:57 AM Saturday 31 - January 2026

ಭಾರೀ ಮಳೆಗೆ ಕಾರಿನ ಮೇಲೆಯೇ ಬಿದ್ದ ಮರ: ಕಾರು ಅಪ್ಪಚ್ಚಿ!

chikkamagaluru car
17/06/2025

ಚಿಕ್ಕಮಗಳೂರು:  ಮಲೆನಾಡಲ್ಲಿ ಮುಂದುವರಿದ ಗಾಳಿ—ಮಳೆ ಅಬ್ಬರ ಮುಂದುವರಿದಿದೆ. ಮಳೆಗೆ ಬೃಹತ್ ಮರವೊಂದು ಬಿದ್ದ ಪರಿಣಾಮ ಓಮ್ನಿ ಕಾರೊಂದು ಅಪ್ಪಚ್ಚಿಯಾಗಿದೆ.

ತರೀಕೆರೆ ತಾಲೂಕಿನ ಕಲ್ಲತ್ತಿಗರಿ ಬಳಿ ಘಟನೆ ನಡೆದಿದೆ. ಕಲ್ಲತ್ತಿಗರಿ ಫಾಲ್ಸ್ ಗೆ ಪ್ರವಾಸಕ್ಕೆಂದು ಪ್ರವಾಸಿಗರು ಈ ಕಾರಿನಲ್ಲಿ ಬಂದಿದ್ದರು. ಈ ಕಾರಿನ ಮೇಲೆಯೇ ಬೃಹತ್ ಮರ ಉರುಳಿ ಬಿದ್ದಿದ್ದು, ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಮರ ಬೀಳುವ ವೇಳೆ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಬೃಹತ್ ಮರ ಬಿದ್ದ ರಭಸಕ್ಕೆ ಕಾರು ಅಪ್ಪಚ್ಚಿಯಾಗಿದೆ.  ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version