ರಾಹುಲ್ ಗಾಂಧಿ ಮಾತ್ರ ಯಾಕೆ? ಪ್ರಧಾನಿ ಮೋದಿಯನ್ನೂ ಅನರ್ಹಗೊಳಿಸಿ ಎಂದ ತೃಣಮೂಲ ಕಾಂಗ್ರೆಸ್!
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡ ಅನರ್ಹಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಪ್ರಧಾನಿ ಮೋದಿ ಅವರು ವ್ಯಂಗ್ಯ ಟೀಕೆ ಮಾಡುವ ಮೂಲಕ ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ. ಅವರನ್ನು ಕೂಡ ಅನರ್ಹ ಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಹುಲ್ ಗಾಂಧಿ ಅವರನ್ನು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದಡಿ ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಸಾಧ್ಯವಾಗುವುದಾದರೆ ಪ್ರಧಾನಿ ಮೋದಿ ವಿರುದ್ಧ ಏಕೆ ಸಾಧ್ಯವಾಗುವುದಿಲ್ಲ? ಎಂದು ಟಿಎಂಸಿಯ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.
ಬುಡಕಟ್ಟು ಜನಾಂಗದ ಹಿನ್ನೆಲೆ ಹೊಂದಿರುವ ಮಹಿಳಾ ಸಚಿವರಿಗೆ ಅವಮಾನ ಮಾಡಿದ ಸುವೇಂದು ಅಧಿಕಾರಿ ವಿರುದ್ಧ ಪ್ರಕರಣ ದಾಖಲಿಸುವಂತೆ ಪಕ್ಷದ ಕಾನೂನು ವಿಭಾಗಕ್ಕೆ ಬ್ಯಾನರ್ಜಿ ಕೋಲ್ಕತ್ತಾದಲ್ಲಿ ನಡೆದ ಸಮಾವೇಶದಲ್ಲಿ ಕರೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























