ಮನೆಯಲ್ಲೇ ಯುವತಿಯ ಮೇಲೆ ಅತ್ಯಾಚಾರವೆಸಗಿದ ತೃಣಮೂಲ ನಾಯಕನ ಬಂಧನ - Mahanayaka
9:10 AM Saturday 14 - December 2024

ಮನೆಯಲ್ಲೇ ಯುವತಿಯ ಮೇಲೆ ಅತ್ಯಾಚಾರವೆಸಗಿದ ತೃಣಮೂಲ ನಾಯಕನ ಬಂಧನ

15/09/2024

ತನ್ನ ನಿವಾಸದಲ್ಲೇ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ನಾಯಕನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಕುರ್ ನಲ್ಲಿರುವ ತನ್ನ ಮನೆಯಲ್ಲಿ ಮಿತ್ರಾ ತನ್ನ ಮೇಲೆ 2-3 ದಿನಗಳ ಕಾಲ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ನೀಡಿದ ದೂರಿನ ಮೇರೆಗೆ ತೃಣಮೂಲ ಕಾಂಗ್ರೆಸ್ ನ ಟ್ರೇಡ್ ಯೂನಿಯನ್ ನಾಯಕರಾಗಿರುವ ಆರೋಪಿ ನಾರಾಯಣ್ ಮಿತ್ರಾ ಅವರನ್ನು ಬಂಧಿಸಲಾಗಿದೆ.

ಎಫ್ಐಆರ್ ದಾಖಲಿಸಲಾಗಿದ್ದು, ಮಿತ್ರಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಇದರ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕನನ್ನು ತಮ್ಮ ಟ್ರೇಡ್ ಯೂನಿಯನ್‌ನಿಂದ ಅಮಾನತುಗೊಳಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ