ಟಿಎಂಸಿ ಪಕ್ಷದ ನಾಯಕನ ಬೆಂಗಾವಲು ವಾಹನದ ಮೇಲೆ ಬಿಜೆಪಿ ಬೆಂಬಲಿಗರಿಂದ ದಾಳಿ

31/03/2024

ಪಶ್ಚಿಮ ಬಂಗಾಳದ ಸಚಿವ ಉದಯನ್ ಗುಹಾ ಅವರ ಬೆಂಗಾವಲು ವಾಹನದ ಮೇಲೆ ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ನಿಸಿತ್ ಪ್ರಾಮಾಣಿಕ್ ಅವರ ಬೆಂಬಲಿಗರು ಕೂಚ್ ಬೆಹಾರ್ ಪ್ರದೇಶದಲ್ಲಿ ದಾಳಿ ನಡೆಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಭಾನುವಾರ ಆರೋಪಿಸಿದೆ.

ದಾಳಿಯಲ್ಲಿ ಪಕ್ಷದ ಹಲವಾರು ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಟಿಎಂಸಿ ತಿಳಿಸಿದೆ.
ಪಶ್ಚಿಮ ಬಂಗಾಳದ ಆಡಳಿತ ಪಕ್ಷವು ದಿನ್ಹಾಟಾದಲ್ಲಿ ಚುನಾವಣಾ ಪ್ರಚಾರ ರ್ಯಾಲಿಯನ್ನು ಆಯೋಜಿಸಿತ್ತು. ದಿನ್ಹಟಾದಿಂದ ಹೋಗುವ ಮಾರ್ಗದಲ್ಲಿ ಕೂಚ್ ಬೆಹಾರ್ನ ಘುಗುಮರಿ ಪ್ರದೇಶದಲ್ಲಿ ಉದಯನ್ ಗುಹಾ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ.

ಯಾವುದೇ ಪ್ರಚೋದನೆ ಇಲ್ಲದೇ ತನ್ನ ಬೆಂಗಾವಲು ಪಡೆಯ ಮೇಲೆ ಹಿಂದಿನಿಂದ ದಾಳಿ ನಡೆಸಲಾಯಿತು. ಅವರ ಸಹಾಯಕರನ್ನು ಥಳಿಸಲಾಯಿತು ಎಂದು ಉದಯನ್ ಗುಹಾ ಹೇಳಿದ್ದಾರೆ.

ಕೂಚ್ ಬೆಹಾರ್ ನಲ್ಲಿ ಉದಯನ್ ಗುಹಾ ಮತ್ತು ನಿಸಿತ್ ಪ್ರಾಮಾಣಿಕ್ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ಘರ್ಷಣೆಯಲ್ಲಿ ಕೆಲವು ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವಾರು ಜನರು ಗಾಯಗೊಂಡಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version